ಬಿಜೆಪಿ ಸೇರಿ ಮನುವಾದಿಯಾದ ಹೆಚ್‌ ಡಿ ಕುಮಾರಸ್ವಾಮಿ: ಸಿಎಂ ಸಿದ್ದರಾಮಯ್ಯ ಟೀಕೆ

Date:

ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ ಡಿ ಕುಮಾರಸ್ವಾಮಿ ಬರೆದ ಪತ್ರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಮಾಯ್ಯ, “ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಮೇಲೆ ಅಧಿಕೃತವಾಗಿ ಮನುವಾದಿಗಳಾಗಿದ್ದಾರೆ” ಎಂದು ಟೀಕಿಸಿದರು.

- Advertisement -

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂತಹ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ” ಎಂದು ಹೇಳಿದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು

“ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....