ಇಂಧನ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ; ನಿರ್ಧಾರ ಹಿಂಪಡೆಯಲು ಆಗ್ರಹ

Date:

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳ ನಡುವೆಯೂ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ. ಈ ನಿರ್ಧಾರವು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಇಂಧನ ದರವನ್ನು ಹೆಚ್ಚಿಸಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಏರಿಸುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿ ಇತರ ರಾಜ್ಯಗಳಿಗಿಂತ ಇಂಧನ ದರ ಗಣನೀಯವಾಗಿ ಕಡಿಮೆಯಿದ್ದಾಗಲೂ ಟೀಕೆ ಮಾಡಿದ್ದ ಬಿಜೆಪಿಯವರು, ಈಗ ಕೇಂದ್ರದ ಈ ಕ್ರಮದ ಕುರಿತು ಏನೆನ್ನುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಬೆಲೆ ಏರಿಕೆಯು ವಿಶೇಷವಾಗಿ ಕಾರ್ಮಿಕರು, ರೈತರು ಮತ್ತು ಬಡ ವರ್ಗದವರ ಮೇಲೆ ತೀವ್ರವಾದ ಆರ್ಥಿಕ ಹೊರೆ ಹೇರಲಿದೆ. ಇಂಧನ ದರ ಏರಿಕೆಯು ಕೇವಲ ಸಾರಿಗೆಗೆ ಸೀಮಿತವಾಗದೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ” ಎಂದು ಸಿಎಂ ಎಚ್ಚರಿಸಿದ್ದಾರೆ.

“ಮೋದಿಯವರ ಆಡಳಿತಕ್ಕೂ ಮುನ್ನ 413 ರೂ. ಇದ್ದ ಎಲ್‌ಪಿಜಿ ಸಿಲಿಂಡರ್ ದರ ಇಂದು 1,000 ರೂ. ದಾಟಿದೆ. ಒಂದೆಡೆ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದರೆ, ಮತ್ತೊಂದೆಡೆ ದರ ಏರಿಕೆಯು ಸಾಮಾನ್ಯ ಜನರ ಬಜೆಟ್ ಅನ್ನು ತಲೆಕೆಳಗಾಗಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ವಿಭಜನೆ, ಸಾಲು-ಸಾಲು ಸೋಲು, ಪಕ್ಷಾಂತರದ ಪೆಟ್ಟು; ಅಸ್ತಿತ್ವಕ್ಕಾಗಿ ಹೋರಾಟುತ್ತಿದೆ ಎಐಎಡಿಎಂಕೆ

ನೀಟ್‌ ಅಕ್ರಮದ ಕುರಿತು ಮಾತನಾಡಿದ ಅವರು, “ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಯುಜಿ ಪರೀಕ್ಷೆಯ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೇಂದ್ರದ ಬೇಜವಾಬ್ದಾರಿಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ. ಸರಿಯಾದ ರೀತಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗದ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ವಿದ್ಯಾರ್ಥಿಗಳು ಬೆಲೆ ತೆರುವಂತಾಗಿದೆ” ಎಂದಿದ್ದಾರೆ.

“ಚುನಾವಣಾ ಆಯೋಗವು ರಾಜ್ಯದಲ್ಲಿ ಘೋಷಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ. ಸುಗಮವಾಗಿ ಪ್ರಕ್ರಿಯೆ ನಡೆಯಲು ಬೇಕಾದ ಸಹಕಾರ ನೀಡಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ಈ ದಿನ ಸಂಪಾದಕೀಯ | ಬರ, ಸರ್ವಪಕ್ಷ ನಿಯೋಗ ಮತ್ತು ರಾಜಕಾರಣಿಗಳ ಕಪಟ ನಾಟಕ

ಯಾವ ಪಕ್ಷ ಅಧಿಕಾರದಲ್ಲಿದ್ದರೂ, ಯಾರೇ ಮುಖ್ಯಮಂತ್ರಿಗಳಾಗಿದ್ದರೂ ಪ್ರಕೃತಿ ವಿಕೋಪದಿಂದ ಪಾರಾಗುವುದು ಸಾಧ್ಯವಿಲ್ಲ....