ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಸಿಎಂ, ಡಿಸಿಎಂ ಮಾಲಾರ್ಪಣೆ

Date:

ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸೌಧದ ನಿರ್ಮಾತೃ ದಿ. ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ದಿವಂಗತ ಕೆಂಗಲ್ ಹನುಮಂತಯ್ಯ ನವರ ಮೊಮ್ಮಗನಾದ ಕೆಂಗಲ್ ಶ್ರೀಪಾದ ರೇಣು ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳ ಜೊತೆಗೂಡಿ ಪ್ರತಿಮೆಗೆ ಪುಷ್ಪಗುಚ್ಛ ಸಮರ್ಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬೆಂಗಳೂರಿನ ಇಂದಿನ ಅಭಿವೃದ್ಧಿಗೆ ಕೆಂಗಲ್ ಹನುಮಂತಯ್ಯ ಕಾರಣ

ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ‌, “ಇಂದು ನಾವೆಲ್ಲರೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರನ್ನು ಸ್ಮರಿಸುತ್ತಿದ್ದೇವೆ. ವಿಧಾನ ಸೌಧ ಕಟ್ಟಿದವರು ಕೆಂಗಲ್ ಹನುಮಂತಯ್ಯ ಅವರು, ವಿಕಾಸ ಸೌಧ ಕಟ್ಟಿದವರು ಎಸ್.ಎಂ ಕೃಷ್ಣ ಅವರು, ಬೆಂಗಳೂರನ್ನು ಕಟ್ಟಿದ್ದು ಕೆಂಪೇಗೌಡರು. ಇವೆಲ್ಲವೂ ಈ ನಾಯಕರು ಬಿಟ್ಟು ಹೋಗಿರುವ ಸಾಕ್ಷಿಗುಡ್ಡೆ” ಎಂದರು.

“ಅಂದಿನ ಕಾಲದಲ್ಲಿ ರಾಜಧಾನಿಯನ್ನಾಗಿ ಬೇರೆ ಪ್ರದೇಶವನ್ನು ಆಯ್ಕೆ ಮಾಡಿದ್ದರೆ, ಇಂದು ಬೆಂಗಳೂರು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಬೆಂಗಳೂರಿನಲ್ಲಿರುವ ಹವಾಮಾನ ಕಂಡು ಇಡೀ ವಿಶ್ವದ ಜನ ಆಕರ್ಷಿತರಾಗುತ್ತಾರೆ. ಸಮುದ್ರದ ಪಕ್ಕದಲ್ಲಿನ ನಗರಗಳಿಗೆ ಆಗುತ್ತಿರುವ ಸಮಸ್ಯೆ ನೀವು ಗಮನಿಸಿದ್ದೀರಿ. ಬೆಂಗಳೂರು ದೇಶದಲ್ಲೇ ಅತ್ಯುತ್ತಮ ಸುರಕ್ಷಿತ ಪ್ರದೇಶ. ಇದಕ್ಕೆ ಮುನ್ನುಡಿ ಬರೆದವರು ಕೆಂಗಲ್ ಹನುಮಂತಯ್ಯನವರು. ನಮಗೆ ಅಧಿಕಾರ ಸಿಕ್ಕಾಗ ಇಂತಹ ಸಾಕ್ಷಿಗುಡ್ಡೆಗಳನ್ನು ಬಿಟ್ಟುಹೋಗಬೇಕು” ಎಂದು ತಿಳಿಸಿದರು.

ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...