ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ಬೆಂಗಳೂರಿನ‌ಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ‘ಪತ್ರಿಕಾ ದಿನಾಚರಣೆ-2025’ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದರು.

- Advertisement -

ಬಳಿಕ ಮಾತನಾಡಿದ ಅವರು, “ಸುಳ್ಳು ಸುದ್ದಿಗಳು ಹೆಚ್ಚಾಗಿ, ಈಗ ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಯಾವುದೇ ಚಾನಲ್‌ಗಳು ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಢ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ” ಎಂದು ಪ್ರಶ್ನಿಸಿದರು.

“ನಾನು ಇವತ್ತು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಆರೋಗ್ಯ ಸಂಜೀವಿನಿ ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇವೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಜಾರಿ ಮಾಡಿರುವುದಲ್ಲ. ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಿ” ಎಂದು ಕರೆ ನೀಡಿದರು.

“ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು. ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ. ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು. ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...