ಹೈಕಮಾಂಡ್‌ನಿಂದ ತುರ್ತು ಕರೆ; ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರನೆ ದೆಹಲಿಗೆ ಹೊರಟಿದ್ದಾರೆ. ಅವರಿಗೆ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆ ಅವರು ದೆಹಲಿ ಎಡೆಗೆ ಹೊರಟಿದ್ದಾರೆ. ಅವರ ತುರ್ತು ದೆಹಲಿ ಭೇಟಿಯು ಕಾಂಗ್ರೆಸ್‌ ರಾಜಕೀಯದಲ್ಲಿ ಕುತುಹಲ ಮೂಡಿಸಿದೆ.

- Advertisement -

ದೆಹಲಿಗೆ ಹೊರಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ನನ್ನನ್ನು ದೆಹಲಿಗೆ ಆಹ್ವಾನಿಸಲಾಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇದೆ; ಕಾರ್ಯಸೂಚಿ ನನಗೆ ತಿಳಿದಿಲ್ಲ. ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಲು ವೇಣುಗೋಪಾಲ್ ನನಗೆ ಕರೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಈ ದಿಢೀರ್ ಸಭೆಯ ಕಾರ್ಯಸೂಚಿ ಅಥವಾ ಅಜೆಂಡಾ ಏನೆಂಬುದರ ಬಗ್ಗೆ ನಮಗೆ ಯಾವುದೇ ಪೂರ್ವ ಮಾಹಿತಿ ಇಲ್ಲ” ಎಂದು ಅವರು ತಿಳಿಸಿದ್ದಾರೆ.

ಅವರ ದೆಹಲಿ ಭೇಟಿ ಮತ್ತು ಸಭೆಯ ಅಜೆಂಡಾ ಬಹಿರಂಗವಾಗದಿದ್ದರೂ, ರಾಜ್ಯ ಸರ್ಕಾರದ ಆಡಳಿತಾತ್ಮಕ ವಿಷಯಗಳು, ಪಕ್ಷದ ಸಂಘಟನೆ ಅಥವಾ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಹೈಕಮಾಂಡ್ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯ ಬದಲಾವಣೆ ಅಥವಾ ನಾಯಕತ್ವದ ಸುತ್ತ ಕೇಳಿಬರುತ್ತಿರುವ ಸರಣಿ ಊಹಾಪೋಹಗಳ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ ಸಿದ್ದರಾಮಯ್ಯ ಅವರು ಅತ್ಯಂತ ನಿರುಮ್ಮಳವಾಗಿ ಉತ್ತರಿಸಿದ್ದಾರೆ. ರಾಜಕಾರಣದಲ್ಲಿ ಇಂತಹ ಊಹಾಪೋಹಗಳು ಮತ್ತು ವದಂತಿಗಳು ಯಾವಾಗಲೂ ಇದ್ದೇ ಇರುತ್ತವೆ ಎಂದು ಹೇಳಿ, ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...