ರಕ್ಷಣಾ ಸಚಿವ ರಾಜನಾಥಸಿಂಗ್ ಬಳಿ ಮೂರು ಬೇಡಿಕೆ ಮುಂದಿಟ್ಟ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು.

- Advertisement -

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ರಾಜನಾಥಸಿಂಗ್ ಅವರ ಬಳಿ ಮೂರು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ. ಮೊದಲನೆಯದ್ದು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು. ಎರಡನೆಯದ್ದು ಉತ್ತರ ಪ್ರದೇಶ ಮತ್ತು ತಮಿಳುನಾಡಿ ರೀತಿ ಡಿಫೆನ್ಸ್‌ ಕಾರಿಡಾಡರ್‌ ನಿರ್ಮಾಣ ಹಾಗೂ ಮೂರನೆಯದ್ದು ಡಿಫೆನ್ಸ್‌ ಲ್ಯಾಂಡ್‌ ನೀಡಲು ಮನವಿ ಮಾಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಟನಲ್‌ ನಿರ್ಮಾಣ, ಲಿಂಕ್‌ ರೋಡ್‌ ಅಭಿವೃದ್ಧಿ ಹಾಗೂ ಫ್ಲೈ ಓವರ್‌ ನಿರ್ಮಾಣಕ್ಕೆ ಡಿಫೆನ್ಸ್‌ ಲ್ಯಾಂಡ್‌ ಬೇಕಾಗುತ್ತದೆ. ಹೀಗಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದ್ದೇನೆ. ವೈಮಾನಿಕ‌ ಪ್ರದರ್ಶನಕ್ಕೆ ಒಪ್ಪಿಗೆ ನೀಡಿದ್ದಾರೆ. ಉಳಿದ ಎರಡು ವಿಚಾರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ತಿಳಿಸಿದರು.

“ಪ್ರಧಾನಿ ಮೋದಿ ಅವರ ಭೇಟಿಗೆ ಸಮಯ ಕೇಳಲಾಗಿದೆ. ಗುರುವಾರ ಅವಕಾಶ ಕೊಟ್ಟರೆ ಭೇಟಿಯಾಗುತ್ತೇವೆ. ನಾನು, ಡಿ ಕೆ ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಅವರನ್ನು ಭೆಟಿಯಾಗುತ್ತೇವೆ ಎಂದು ಸುದ್ದಿಯಾಗಿದೆ. ರಾಹುಲ್‌ ಗಾಂಧಿ ಅವರು ಅವಕಾಶ ಕೊಟ್ಟರೆ ಸಿಗುತ್ತೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ನಾಳೆ ದೆಹಲಿಗೆ ಸುರ್ಜೇವಾಲಾ ಆಗಮಿಸಲಿದ್ದಾರೆ. ಭೇಟಿಯಾಗಿ ಪಕ್ಷದ ವಿಚಾರ ಚರ್ಚಿಸುತ್ತೇವೆ” ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...