BREAKING NEWS | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ.

- Advertisement -

ಸದ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಪತ್ನಿಯ ಅನಾರೋಗ್ಯದ ಕಾರಣದಿಂದಾಗಿ ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿಲ್ಲ. ಆದ್ದರಿಂದ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಇನ್ನಷ್ಟೇ ರಾಜೀನಾಮೆಯನ್ನು ಅಂಗೀಕರಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಇದನ್ನು ಓದಿದ್ದೀರಾ? BREAKING | ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಇಂದು ಬೆಳಿಗ್ಗೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಉಪಾಹಾರ ಕೂಟ ಏರ್ಪಡಿಸಿದ್ದರು. ಈ ವೇಳೆ “ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಘೋಷಿಸಿದ್ದರು. ಹಾಗೆಯೇ ಮುಂದಿನ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದಿದ್ದರು.

ರಾಜೀನಾಮೆ ನೀಡಿದ ಬಳಿಕ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ನಾನು ರಾಜೀನಾಮೆ ನೀಡಿದ್ದೇನೆ. ರಾಜ್ಯಪಾಲರು ನನ್ನ ರಾಜೀನಾಮೆ ಪತ್ರವನ್ನು ಸಂವಿಧಾನ ಪ್ರಕಾರವಾಗಿ ಅಂಗೀಕರಿಸುತ್ತಾರೆ ಎಂಬ ನಂಬಿಕೆಯಿದೆ. ನನ್ನ ರಾಜೀನಾಮೆ ಅಂಗೀಕರಿಸಿ ಮುಂದಿನ ಮುಖ್ಯಮಂತ್ರಿಗೆ ಅವಕಾಶ ಮಾಡಿಕೊಡಬೇಕಾಗಿದ್ದು ರಾಜ್ಯಪಾಲರ ಜವಾಬ್ದಾರಿ” ಎಂದು ಹೇಳಿದರು.

cm resign1
ರಾಜೀನಾಮೆ ನೀಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ

“ಕನ್ನಡದ ಮೇರು ನಟ ಡಾ. ರಾಜಕುಮಾರ್ ಅಭಿಮಾನಿಗಳನ್ನು ದೇವರು ಎನ್ನುತ್ತಿದ್ದರು. ನಾನು ರಾಜಕಾರಣಿ. ನಾನು ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವವನು. ಮತದಾರರೇ ನನ್ನ ಅಭಿಮಾನಿ ದೇವರು” ಎಂದು ತಮ್ಮ ರಾಜಕೀಯ ಜೀವನದ ಬಗ್ಗೆ ಮಾತನಾಡುತ್ತಾ ಭಾವುಕರಾದರು.

“ನಾನು ಹಳ್ಳಿಯಿಂದ ಬಂದವನು. ಶಾಸಕ, ಸಚಿವ, ಮುಖ್ಯಮಂತ್ರಿ, ವಿಪಕ್ಷ ನಾಯಕನಾಗುತ್ತೇನೆ ಎಂದು ಅಂದುಕೊಂಡಿರಲಿಲ್ಲ. ನಾನು ರಾಜಕಾರಣಕ್ಕೆ ಬಂದಿದ್ದೇ ಆಕಸ್ಮಿಕ. ಯಾಕೆಂದರೆ ನಮ್ಮ ಕುಟುಂಬದಲ್ಲಿ ಯಾರೂ ರಾಜಕಾರಣದಲ್ಲಿಲ್ಲ” ಎಂದು ತಿಳಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷಕ್ಕೆ, ಮಾಧ್ಯಮಗಳಿಗೆ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಇದನ್ನು ಓದಿದ್ದೀರಾ? ಸಿಎಂ ಕುರ್ಚಿ: ಘನತೆಯಿಂದ ವರ್ತಿಸಿದ ರಾಜಕಾರಣಿಗಳು; ಘನತೆ ಮರೆತ ಮಾಧ್ಯಮಗಳು

“ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಐದು ಗ್ಯಾರಂಟಿ ಯೋಜನೆಗಳನ್ನೂ ಘೋಷಿಸಿದ್ದೇನೆ. ಐದು ಗ್ಯಾರಂಟಿಗಳನ್ನೂ ಮೊದಲನೇ ವರ್ಷವೇ ಜಾರಿಗೊಳಿಸಿದ್ದೇವೆ. ನಾವು ಜನತೆಗೆ ಕೊಟ್ಟ ಭರವಸೆಗಳನ್ನು, ವಚನಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇವೆ. ಮಾತಿಗೆ ತಪ್ಪಿಲ್ಲ. ಇದು ನನಗೆ ಮತ್ತು ಪಕ್ಷಕ್ಕೆ ಸಂತೃಪ್ತಿಯನ್ನು ಕೊಟ್ಟಿರುವಂತಹ ವಿಚಾರ” ಎಂದರು.

“ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತದೆ. ನಾವು ಜಾರಿ ಮಾಡಲ್ಲ ಎಂಬ ಅಪಪ್ರಚಾರ ಮಾಡಿದರು. ಆದರೆ ಕರ್ನಾಟಕ ತಲಾ ಆದಾಯದಲ್ಲಿ ‘ನಂಬರ್ ವನ್’ ಸ್ಥಾನದಲ್ಲಿದ್ದೇವೆ. ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಸಿದ್ದರಾಮಯ್ಯ ಸಿಎಂ, ಹಣಕಾಸು ಸಚಿವರಾಗಿ ಸಾಲ ಮಾಡಿದ್ದಾರೆ ಎಂಬುದು ಸುಳ್ಳು” ಎಂದು ತಿಳಿಸಿದರು.

“ನಾನೆಂದಿಗೂ ಅಧಿಕಾರ, ಹಣದ ಹಿಂದೆ ಹೋದವನಲ್ಲ. ಆಸ್ತಿ-ಪಾಸ್ತಿ ಮಾಡಬೇಕೆಂದುಕೊಂಡವನಲ್ಲ. ಮತದಾರ ದೇವರು ಅಧಿಕಾರ ಕೊಟ್ಟಿದ್ದಾರೆ. ನಾನು ರಾಜಕೀಯಕ್ಕೆ ಬಂದು ಸುಮಾರು 50 ವರ್ಷವಾಗುತ್ತಾ ಬಂದಿದೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಇಂದಿನ ರಾಜಕೀಯದಲ್ಲಿ ಜನಶಕ್ತಿ ಇರುವವರು ಮಾತ್ರ ರಾಜಕೀಯದಲ್ಲಿರಲು ಸಾಧ್ಯ. ಅಧಿಕಾರ ನೀಡುವುದೂ ಗೆದ್ದ ಮೇಲೆಯೇ. ನಾನು ಎಂದಿಗೂ ನಂಬಿದ ಮೌಲ್ಯದ ಜತೆ ರಾಜಿ ಮಾಡಿಕೊಟ್ಟಿಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.

“ರಾಜಕಾರಣದಲ್ಲಿ ಕೊನೆಯುಸಿರು ಇರುವವರೆಗೂ ಕೋಮುವಾದಿ ಶಕ್ತಿಗಳ ವಿರುದ್ಧ, ಸಂವಿಧಾನಕ್ಕೆ ಧಕ್ಕೆ ತರುವವರ ವಿರುದ್ಧ ಹೋರಾಟ ಮಾಡುತ್ತೇನೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡವರು. ಸಂವಿಧಾನ ಇಲ್ಲದಿದ್ದರೆ ನಾವು ವಿದ್ಯಾವಂತರು, ಶಾಸಕರು, ಮುಖ್ಯಮಂತ್ರಿ ಆಗುತ್ತಿರಲಿಲ್ಲ” ಎಂದರು.

ರಾಜ್ಯಸಭೆಗೆ ಹೋಗಿ ಎಂದರು. ನಾನು ಬಹಳ ವಿನಮ್ರವಾಗಿ ಆಗಲ್ಲ ಎಂದೆ. ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದು ತಿಳಿಸಿದೆ ಎಂದು ರಾಜ್ಯಸಭೆಗೆ ಹೋಗುವ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಪ್ರಭಾವಿ ನಾಯಕಿ, ಮಾಜಿ ಸಂಸದೆ ಈಗ ಕರ್ನಾಟಕದ ನೂತನ ರಾಜ್ಯಪಾಲೆ

ಕರ್ನಾಟಕದ ರಾಜಭವನಕ್ಕೆ ಮತ್ತೊಬ್ಬ ಬಿಜೆಪಿ ಹಿನ್ನೆಲೆಯ ರಾಜಕಾರಣಿ ಪ್ರವೇಶಿಸುತ್ತಿದ್ದಾರೆ. ಅಕ್ಟೋಬರ್ 12ರಂದು...

ದಲಿತ ಯುವಕರ ಮೇಲೆ ದಲಿತ ಸಮುದಾಯದವರಿಂದಲೇ ಅಮಾನವೀಯ ಹಲ್ಲೆ, ಬಾಯಿಗೆ ಮೂತ್ರ ವಿಸರ್ಜನೆ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಕೂಲಿ ಕಾರ್ಮಿಕರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ, ಮಾರಣಾಂತಿಕವಾಗಿ ಥಳಿಸಿದರಲ್ಲದೆ,...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು...

ಲೋಹಿಯಾ ಚಿಂತನೆಗಳನ್ನು ಜಾರಿಗೆ ತರಲು ಗ್ಯಾರಂಟಿ ಯೋಜನೆಗಳ ಮೂಲಕ ಪ್ರಯತ್ನಿಸಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿನ ಅಸಮಾನತೆ ಮತ್ತು ಜಾತೀಯತೆಯನ್ನು ತೊಡೆದುಹಾಕದೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ....