ರಾಜಕೀಯಕ್ಕಾಗಿ ಬಿಜೆಪಿಯಿಂದ ಬರ ಅಧ್ಯಯನ: ಸಿಎಂ ಸಿದ್ದರಾಮಯ್ಯ ಕಿಡಿ

Date:

  • ರಾಜ್ಯ ಬಿಜೆಪಿಯವರು ಏನು ಅಧ್ಯಯನ ಮಾಡುತ್ತಾರೆ?
  • ‘ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನೇ ಬಯ್ಯಲಿ’

ಕೇಂದ್ರ ಸರ್ಕಾರ ರಾಜ್ಯದ ಬರ ಅಧ್ಯಯನ ಮಾಡಿದೆ, ರಾಜ್ಯ ಬಿಜೆಪಿಯವರು ಏನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

“ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನು ಮೊದಲು ಕೊಡಿಸಲಿ. ಬಿಜೆಪಿಯ 25 ಸಂಸದರಿದ್ದಾರಲ್ಲ ಚರ್ಚಿಸಿ ಅನುದಾನ ಕೊಡಿಸಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಬರ ಪರಿಹಾರ | ರೈತರಿಗೆ ನೆರವು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಚಲುವರಾಯಸ್ವಾಮಿ

“ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ” ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಇದೇ ವೇಳೆ ವಾಗ್ದಾಳಿ ನಡೆಸಿದರು.

ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ ಎಂಬ ಎಚ್ ​ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಬರ ಅಧ್ಯಯನ ನಡೆಸಿದ್ದು ಕೇಂದ್ರ ಸರ್ಕಾರದ ತಂಡ. ವೈಜ್ಞಾನಿಕವಾಗಿ ಮಾಡಿಲ್ಲವೆಂದು ಕೇಂದ್ರ ಸರ್ಕಾರವನ್ನೇ ಬಯ್ಯಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರದ ಕೊಂಬೆ ಬಿದ್ದು ವ್ಯಕ್ತಿಗೆ ಶಾಶ್ವತ ಅಂಗವೈಕಲ್ಯ; ₹2.77 ಕೋಟಿ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಗುಲ್ಮೋಹರ್‌ ಮರದ ಕೊಂಬೆ...

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...