ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಸಿಎಂ ಸಿದ್ದರಾಮಯ್ಯ ಸಲಹೆ

Date:

ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆ ನೀಡಿದರು.

- Advertisement -

ಅವರು ಇಂದು(ಸೆ.19) ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಸಾಲಿನ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

“ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ. ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು” ಎಂದರು.

ಸಮಾನ ಅವಕಾಶಗಳ ಮಹತ್ವ ಬಗ್ಗೆ ಜನರಲ್ಲಿ ಅರಿವು

“ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು” ಎಂದು ಹೇಳಿದರು.

D Umapati
ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಸರಾ- ಸಾಂಸ್ಕೃತಿಕ ನಾಡ ಹಬ್ಬ

“ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಬಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂ ಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ” ಎಂದು ಹೇಳಿದರು.

ಸಮಸಮಾಜದ ಕನಸು ಕಂಡ ಪತ್ರಕರ್ತ

“ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ” ಎಂದು ಕಿವಿಮಾತು ಎಂದರು.

ಮಹಿಳೆಯರಿಗೂ ಸಮಾನತೆ

“ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಹೇಗೆ ಬೇರು ಬಿಟ್ಟಿದೆ ಎಂದರೆ ಐದಾರು ವರ್ಷಗಳಲ್ಲಿ, ಹತ್ತಿಪ್ಪತ್ತು ವರ್ಷಗಳಲ್ಲಿ ಹೋಗುವಂತದ್ದಲ್ಲ. ಆದರೆ ಅಸಮಾನತೆಯ ಮಟ್ಟವನ್ನು ಕಡಿಮೆ ಮಾಡಿ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರಿಗೂ ಸಮಾನತೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ , ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ” ಎಂದರು.

ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ

“ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...