ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್, ದೀಪಾ ಭಾಸ್ತಿಗೆ 10 ಲಕ್ಷ ರೂ. ಪುರಸ್ಕಾರ ಘೋಷಿಸಿದ ಸಿದ್ದರಾಮಯ್ಯ

Date:

Advertisements

ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್ , ದೀಪಾ ಭಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು, ದೀಪಾ ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮುಖ್ಯಮಂತ್ರಿ ಮಾತನಾಡಿದರು.

ಇದನ್ನು ಓದಿದ್ದೀರಾ? ಭಾರತದ ʼಬಾನುʼ ಬೆಳಗಿತು, ಕನ್ನಡದ ಹೃದಯ ʼದೀಪʼ ಬೆಳಗಿತು! ; ಲೇಖಕಿಯರ ಸಂಭ್ರಮ

Advertisements

“ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ. ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು” ಎಂದು ಭರವಸೆ ನೀಡಿದರು.

‌”ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ. ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ” ಎಂದರು.

ಇದನ್ನು ಓದಿದ್ದೀರಾ? ಲೇಖಕಿ ಬಾನು ಮುಷ್ತಾಕ್ ಅವರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಹಿರಂಗ ಪತ್ರ

“ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,
ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ. ಬಸವಣ್ಣನವರು ‘ಇವ ನಮ್ಮವ’ ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ” ಎಂದು ಹೇಳಿದರು.

ಹಾಗೆಯೇ, “ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು” ಎಂದು ಅಭಿಪ್ರಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X