ಕೆಎಚ್ಐಆರ್ ಸಿಟಿ ಹಂತ-1ಕ್ಕೆ ನಾಳೆ (ಸೆ.26) ಸಿಎಂ ಚಾಲನೆ, ಸಿಟಿ ಕಲ್ಪನೆ ಫೋಟೋಗಳಲ್ಲಿ ನೋಡಿ

Date:

Advertisements

ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯಾದ ಯೋಜನೆಯಾದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ (ಕೆಎಚ್ಐಆರ್ ಸಿಟಿ) ಮೊದಲ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಸೆ.26)ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಮಂತ್ರಿಗಳೆಲ್ಲರೂ ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, “ಈ ಹೈಟೆಕ್ ನಗರದ ಪರಿಕಲ್ಪನೆಯು ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಇನ್ನೊಂದು ಎತ್ತರಕ್ಕೆ ಕೊಂಡೊಯ್ಯಲಿದೆ. ಡಾಬಸಪೇಟೆ- ದೊಡ್ಡಬಳ್ಳಾಪುರ ನಡುವೆ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಗೆ ಹೊಂದಿಕೊಂಡೇ ಇರುವ, ಮೊದಲ ಹಂತದಲ್ಲಿ 500 ಎಕರೆಯಲ್ಲಿ ಈ ವಿನೂತನ ನಗರ ಅಸ್ತಿತ್ವಕ್ಕೆ ಬರಲಿದೆ. ಇದನ್ನು ಕ್ರಮೇಣವಾಗಿ 5 ಸಾವಿರ ಎಕರೆಯವರೆಗೂ ವಿಸ್ತರಿಸಲು ಅವಕಾಶಗಳಿವೆ” ಎಂದಿದ್ದಾರೆ.

Advertisements
ಕೆಎಚ್ಐಆರ್ ಸಿಟಿ

“ಇಲ್ಲಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡಲಾಗುವುದು. ಈ ಮೂಲಕ ಜಾಗತಿಕವಾಗಿ ಹೆಸರು ಮಾಡಿರುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್, ಅವುಗಳೊಂದಿಗೆ ಸಹಭಾಗಿತ್ವ, ವೈದ್ಯಕೀಯ ಸಂಸ್ಥೆಗಳು ಮತ್ತು ಆರೋಗ್ಯ ಸೇವೆಗಳು, ಸಂಶೋಧನೆ ಮತ್ತು ನಾವೀನ್ಯತೆ ಇವೆಲ್ಲವೂ ಇಲ್ಲಿ ನೆಲೆಯೂರಲಿವೆ. ಇದಕ್ಕಾಗಿ ಒಟ್ಟು 40 ಸಾವಿರ ಕೋಟಿ ರೂ. ಹೂಡಿಕೆಯಾಗಲಿದ್ದು, ರಾಜ್ಯದ ಆರ್ಥಿಕತೆಗೆ ಇದು ದೊಡ್ಡ ಕೊಡುಗೆ ಕೊಡಲಿದೆ” ಎಂದು ಮಾಹಿತಿ ನೀಡಿದ್ದಾರೆ.

ಕೆಎಚ್ಐಆರ್ ಸಿಟಿ 2

“ಮುಂಬರುವ ದಿನಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನವೋದ್ಯಮಗಳು, ಜೀವವಿಜ್ಞಾನಗಳು, ಸೆಮಿಕಂಡಕ್ಟರ್ ತರಹದ ವಲಯಗಳಿಗೆ ಇಲ್ಲಿ ಆದ್ಯತೆ ಕೊಡಲಾಗುವುದು. ಈ ಮೂಲಕ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಈ ಮೂಲಕ ಬೆಂಗಳೂರು ನಗರವು ಜಾಗತಿಕ ನಾಯಕತ್ವ ವಹಿಸಿಕೊಳ್ಳುವಂತೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಕೆಎಚ್ಐಆರ್ ಸಿಟಿ 3

“ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ನಗರಕ್ಕೆ ಹೊಸ ಹೆಸರು ಕೂಡ ನಾಮಕರಣ ಮಾಡಲಾಗುವುದು. ಇದರಲ್ಲಿ ರಾಜ್ಯ ಮತ್ತು ದೇಶದ ಪ್ರಮುಖ ಉದ್ಯಮಿಗಳು, ಸಂಶೋಧಕರು, ವೈದ್ಯಕೀಯ ಪರಿಣತರು, ಶಿಕ್ಷಣ ತಜ್ಞರು ಕೂಡ ಪಾಲ್ಗೊಳ್ಳಲಿದ್ದಾರೆ” ಎಂದು ಸಚಿವರು ಹೇಳಿದ್ದಾರೆ.

ಕೆಎಚ್ಐಆರ್ ಸಿಟಿ 4
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X