ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Date:

ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಪ್ರಧಾನಿ ಅವರಿಗೆ ಬರೆದ ಪತ್ರದ ಪ್ರತಿಯನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು, “ಕರ್ನಾಟಕದಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿದ್ದು, ಸ್ಥಳೀಯ ಕೈಗಾರಿಕೆಗಳ ಬಳಕೆಯ ಸಾಮರ್ಥ್ಯಕ್ಕಿಂತ ಇದು ಹೆಚ್ಚಾಗಿದೆ. ಆದ್ದರಿಂದ ಭಾರತ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಬೇಕು” ಎಂದು ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಸಿಎಂ ಬರೆದ ಪತ್ರ ಹೀಗೆದೆ…

ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ,

ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶದಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇನೆ. ಇವು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ.

ಈ ಖಾರಿಫ್ ಋತುವಿನಲ್ಲಿ ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಮೆಕ್ಕೆ ಜೋಳ ಹಾಗೂ ಹೆಸರುಕಾಳನ್ನು 4.16 ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದ್ದು, ರಾಜ್ಯದಲ್ಲಿ ಸುಮಾರು 54.74 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚು ಮೆಕ್ಕೆ ಜೋಳ ಮತ್ತು ಹೆಸರುಕಾಳು 1.983 ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಉತ್ಪಾದನೆಯಾಗುವ ನಿರೀಕ್ಷೆಯಿದೆ. ಇದು ಸಮೃದ್ಧಿಯ ಅವಕಾಶವಾಗಬೇಕಿತ್ತು, ಆದರೆ ಪ್ರಸ್ತುತ ಮಾರುಕಟ್ಟೆ ಸ್ಥಿತಿಯು ಇದನ್ನು ಸಂಕಷ್ಟವನ್ನಾಗಿ ಪರಿವರ್ತಿಸಿದೆ.

ಕೇಂದ್ರ ಸರ್ಕಾರವು ಮೆಕ್ಕೆ ಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹2,400 ಹಾಗೂ ಹೆಸರುಕಾಳಿಗೆ ₹8,768 ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ಜೋಳಕ್ಕೆ ₹1600-1800 ಮತ್ತು ಹೆಸರುಕಾಳಿಗೆ ₹5,400 ಆಸುಪಾಸಿನಲ್ಲಿರುವುದು ತೀವ್ರ ಮತ್ತು ಹಿಂದೆಂದೂ ಕಾಣದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಹಿಂದಿನ ಮೂರು ವರ್ಷಗಳ ಮಾದರಿ ಬೆಲೆಗಳು ಎಂಎಸ್‌ಪಿ ಗಿಂತ ಹೆಚ್ಚಿರುವಾಗ, ಈ ವರ್ಷ ಬಾಹ್ಯ ಒತ್ತಡಗಳ ಪರಿಣಾಮ ಮತ್ತು ಸರಬರಾಜು-ಬೇಡಿಕೆಗಳ ಅಸಮತೋಲನದಿಂದ ಬೆಲೆಗಳು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದಿವೆ.

ಕರ್ನಾಟಕದಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿದ್ದು, ಸ್ಥಳೀಯ ಕೈಗಾರಿಕೆಗಳ ಬಳಕೆಯ ಸಾಮರ್ಥ್ಯಕ್ಕಿಂತ ಇದು ಹೆಚ್ಚಾಗಿದೆ. ಆದ್ದರಿಂದ ಭಾರತ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ, ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ:

  1. NAFED, FCI ಮತ್ತು NCCF ಗೆ ತಕ್ಷಣ ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು ನಿರ್ದೇಶನ ನೀಡಬೇಕು

ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು.

  1. ಎಥೆನಾಲ್ ಪೂರೈಕೆಯ ಇಡಿ ವ್ಯವಸ್ಥೆಯಲ್ಲಿ ಕರ್ನಾಟಕದ ರೈತರ ನ್ಯಾಯಯುತ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿ

ಮೆಕ್ಕೆ ಜೋಳದಿಂದ ಉತ್ಪಾದಿತ ಎಥೆನಾಲ್‌ಗೆ ಮೂಲ ದರ ಲೀಟರ್‌ಗೆ ₹66.07 ಇದ್ದು, ಮೆಕ್ಕೆ ಜೋಳದಿಂದ ಪಡೆದ ಎಥೆನಾಲ್‌ಗೆ ಲೀಟರ್‌ಗೆ ₹5.79 (GST ಹೊರತುಪಡಿಸಿ) ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ.

ಆದರೆ ಕರ್ನಾಟಕದ ಅನೇಕ ಎಥೆನಾಲ್ ಘಟಕಗಳು ರೈತರನ್ನು ಬಿಟ್ಟು ಮಧ್ಯವರ್ತಿಗಳಿಂದ ಮತ್ತು ವ್ಯಾಪಾರಿಗಳಿಂದ ಮೆಕ್ಕೆ ಜೋಳ ಖರೀದಿಸುತ್ತಿವೆ. ಇದು ಎಂಎಸ್‌ಪಿ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಉದ್ದೇಶವನ್ನೇ ವಿಫಲಗೊಳಿಸುತ್ತದೆ.

ಎಥೆನಾಲ್ ಘಟಕಗಳು ರೈತರಿಂದ ಅಥವಾ ರೈತ ಉತ್ಪಾದಕ ಸಂಘಗಳಿಂದ (FPO) ನೇರವಾಗಿ ಮೆಕ್ಕೆ ಜೋಳ ಖರೀದಿಸುವಂತೆ ಕೇಂದ್ರ ಸರ್ಕಾರವು ಆದೇಶಿಸಬೇಕು. ನೇರ ಖರೀದಿ ಖಾತ್ರಿಗೊಳ್ಳದಿದ್ದಲ್ಲಿ, ರೈತರಿಗೆ ಪ್ರೋತ್ಸಾಹಧನ ತಲುಪದಿದ್ದ ಪಕ್ಷದಲ್ಲಿ ಎಥೆನಾಲ್ ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಮರುಪರಿಶೀಲಿಸಬೇಕು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

35 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ‘ಋತು ತಾರೆ’ ಯೋಜನೆ; ನಟಿ ರಮ್ಯಾ ರಾಯಭಾರಿ!

ರಾಜ್ಯದಲ್ಲಿ 35 ವರ್ಷ ಮೇಲ್ಪಟ್ಟ ಮಧ್ಯವಯಸ್ಸಿನ ಮಹಿಳೆಯರ ಸಮಗ್ರ ಆರೋಗ್ಯ ರಕ್ಷಣೆಗೆ...

ಮೈಸೂರಿಗೆ ಹಸಿರು ಹೊದಿಕೆ: 2 ಲಕ್ಷ ಗಿಡ ಬೆಳೆಸುವ ಗುರಿ; ‘ಭಾರತ್ ವನ್’ ಯೋಜನೆಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿಯಲ್ಲಿ ಹಸಿರು ಹೊದಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ನಗರ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...