ಬೆಂಗಳೂರಿನಲ್ಲಿ ಇಂದು ಕಾಕ್ರೋಚ್ ಪಾರ್ಟಿ ಪ್ರತಿಭಟನೆ; ನಟ ಪ್ರಕಾಶ್ ರಾಜ್ ಭಾಗಿ

Date:

ಶಿಕ್ಷಣ ಕ್ಷೇತ್ರದಲ್ಲಿನ ವೈಫಲ್ಯ ಮತ್ತು ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ದೇಶಾದ್ಯಂತ ಸಂಜೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆಗಳನ್ನು ನಡೆಸುತ್ತಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ನಟ, ಹೋರಾಟಗಾರ ಪ್ರಕಾಶ್‌ ರಾಜ್ ಭಾಗವಹಿಸಲಿದ್ದಾರೆ.

- Advertisement -

ಇತ್ತೀಚೆಗೆ ನಡೆದ ನೀಟ್ ಪರೀಕ್ಷಾರ್ಥಿಗಳ ಆತ್ಮಹತ್ಯೆಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಗಳಲ್ಲಿನ ಸಾಲು ಸಾಲು ಅಕ್ರಮಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಪೇಪರ್ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ಶೈಕ್ಷಣಿಕ ಮೂಲಸೌಕರ್ಯಗಳ ಕುಸಿತದ ಬಗ್ಗೆ ಜಾಗೃತಿ ಮೂಡಿಸುವುದು ಈ ಪ್ರತಿಭಟನೆಯ ಮುಖ್ಯ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ಸ್ಥಳೀಯ ಆಡಳಿತದಿಂದ ಇನ್ನು ಅಧಿಕೃತ ಅನುಮತಿ ಸಿಕ್ಕಿಲ್ಲವಾದರೂ, ಶೀಘ್ರದಲ್ಲೇ ಅನುಮತಿ ಸಿಗುವ ಭರವಸೆ ಇದೆ ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ತಿಳಿಸಿದ್ದಾರೆ.

ಈಗಾಗಲೇ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಮುಂದಿನ ದಿನಗಳಲ್ಲಿ ಭಾನುವಾರವೇ ಜೈಪುರದಲ್ಲಿಯೂ ಪ್ರತಿಭಟನೆ ನಡೆಯಲಿದೆ. ಅಲ್ಲಿನ ಪ್ರತಿಭಟನೆಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮತ್ತು ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಭಾಗವಹಿಸಲಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದಿದ್ದರೆ, ಮುಂದಿನ ದಿನಗಳಲ್ಲಿ ಲಕ್ನೋ, ಅಮೃತಸರ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತದೆ ಎಂದು ಅಭಿಜೀತ್ ದೀಪ್ಕೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ದಿಪ್ಕೆ, “ನೀಟ್ ಪೇಪರ್ ಸೋರಿಕೆ ಮತ್ತು ಸಿಬಿಎಸ್‌ಇ ಮರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಅಕ್ರಮಗಳಿಗೆ ಕೇಂದ್ರ ಸರ್ಕಾರವೇ ಕಾರಣ. ನ್ಯಾಯಸಮ್ಮತ ಮತ್ತು ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಖಾತ್ರಿಪಡಿಸುವಲ್ಲಿ ಶಿಕ್ಷಣ ಸಚಿವಾಲಯ ವಿಫಲವಾಗಿದೆ. ಇದರಿಂದಾಗಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...