ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನು ಓದಿದ್ದೀರಾ? ಮುಂದಿನ ಎರಡು ದಿನ ಮೂರು ಜಿಲ್ಲೆಗಳಲ್ಲಿ ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ
ಮುಂದಿನ 5 ದಿನ ಹೊನ್ನಾವರ, ಬೆಳಗಾವ, ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ದಾವಣಗೆರೆ, ಚಿಂತಾಮಣಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಪ್ರಮುಖ ಬದಲಾವಣೆ ಇರುವುದಿಲ್ಲ ಎಂದು ವರದಿ ಹೇಳಿದೆ.
ಈ ದಿನದ ಹವಾ ಭವಿಷ್ಯ ಮತ್ತು ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು:#KSNDMC pic.twitter.com/5M601j2vig
— Karnataka State Natural Disaster Monitoring Centre (@KarnatakaSNDMC) January 6, 2025
ಇನ್ನು ಜನವರಿ 7ರ ಬೆಳಿಗ್ಗೆವರೆಗೂ ಬೆಂಗಳೂರು ನಗರದಲ್ಲಿ ಮೋಡವಿಲ್ಲದ ಆಕಾಶ ಇರುತ್ತದೆ. ಕೆಲವು ಪ್ರದೇಶಗಳಲ್ಲಿ ಮಂಜು ಆವರಿಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
