ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

Date:

Advertisements

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ.

ಆಗಸ್ಟ್ 22ರಂದು ಮಂಗಳೂರು ಸಕ್ಷಮ ಪ್ರಾಧಿಕಾರವು ರಕ್ಷಣಾ ಕಾಯ್ದೆಯನ್ನು ರದ್ದು ಮಾಡಿದ್ದು ಆಗಸ್ಟ್ 23ರಂದು ಬೆಳಗ್ಗೆ ದೂರುದಾರನ ಬಂಧನ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

Advertisements

ಇನ್ನು 11 ಗಂಟೆಗೆ ಬೆಳ್ತಂಗಡಿ ಕೋರ್ಟ್‌ಗೆ ದೂರುದಾರನನ್ನು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಪಡೆಯಲಿದ್ದಾರೆ ಎಂದು ಎಸ್‌ಐಟಿ ಮೂಲಗಳಿಂದ ಮಾಹಿತಿ ಲಭಿಸಿದೆ. ಸದ್ಯ ದೂರುದಾರರನ್ನು ತಾಲೂಕು ಆಸ್ಪತ್ರೆಗೆ ತಪಾಸಣೆಗಾಗಿ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

ದೂರುದಾರನನ್ನು ಆ.22ರಂದು ಬೆಳಗ್ಗೆ 10 ಗಂಟೆಯಿಂದ ಆ.23ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಖುದ್ದು ಎಸ್‌.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಶವಗಳನ್ನು ತಾನೇ ಅಕ್ರಮವಾಗಿ ಹೂತಿರುವುದಾಗಿ ಹೇಳಿ ವ್ಯಕ್ತಿಯೋರ್ವ ದೂರು ನೀಡಿದ್ದಾನೆ. ಈ ಬಗ್ಗೆ ಪಾಪಪ್ರಜ್ಞೆ ಉಂಟಾಗಿ ದೂರು ನೀಡಿರುವುದಾಗಿ ಹೇಳಿದ್ದಾನೆ. ದೂರುದಾರ ತೋರಿಸಿದ ಸ್ಥಳಗಳಲ್ಲಿ ಈಗಾಗಲೇ ಶೋಧ ನಡೆದಿದ್ದು, ಎರಡು ಸ್ಥಳಗಳಲ್ಲಿ ಮಾನವ ದೇಹದ ಮೂಳೆಗಳು ಪತ್ತೆಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

Download Eedina App Android / iOS

X