ಸಾರಿಗೆ ಕಾರ್ಮಿಕರ ಹೋರಾಟಕ್ಕೆ ಕಾಮ್ರೇಡ್ ಜ್ಯೋತಿ ಅನಂತಸುಬ್ಬರಾವ್ ನಾಯಕತ್ವ

Date:

ಕಾಮ್ರೇಡ್ ಎಚ್‌ ವಿ ಅನಂತಸುಬ್ಬರಾವ್ ಅವರ ನಿಧನದ ನಂತರ ಅವರ ಪುತ್ರಿ, ಖ್ಯಾತ ಹೋರಾಟಗಾರ್ತಿ ಮತ್ತು ಚಿಂತಕಿ ಕಾಮ್ರೇಡ್ ಜ್ಯೋತಿ ಅನಂತಸುಬ್ಬರಾವ್ ಸಾರಿಗೆ ಕಾರ್ಮಿಕರ ಹೋರಾಟದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷರಾಗಿ ಜ್ಯೋತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತಿರುವ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌ ವಿ ಅನಂತಸುಬ್ಬರಾವ್ ಅವರು ಜನವರಿ 28ರಂದು ಹೃದಯಾಘಾತದಿಂದ ನಿಧನರಾಗಿದರು. ಇದೀಗ ಅನಂತಸುಬ್ಬರಾವ್ ಅವರು ಶೂನ್ಯದಿಂದ ಕಟ್ಟಿ ಬೆಳೆಸಿದ ಸಂಘಟನೆಯನ್ನು ಕಾಮ್ರೇಡ್ ಜ್ಯೋತಿ ಮುಂದುವರೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? BREAKING NEWS | ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಜ್ಯೋತಿ ಅನಂತಸುಬ್ಬರಾವ್ ಯಾರು?

ಜ್ಯೋತಿ ಅನಂತಸುಬ್ಬರಾವ್ ಪ್ರಖ್ಯಾತ ಕಾರ್ಮಿಕ ಮುಖಂಡರಾಗಿದ್ದ ದಿವಂಗತ ಎಚ್.ವಿ. ಅನಂತ ಸುಬ್ಬರಾವ್ ಅವರ ಪುತ್ರಿ. ಪ್ರಸ್ತುತ ಸಾಮಾಜಿಕ ಕಾರ್ಯಕರ್ತೆಯಾಗಿ ಮತ್ತು ಸಾರಿಗೆ ನೌಕರರ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಮಹಿಳಾ ಆಂದೋಲನಗಳ ಒಕ್ಕೂಟದ ಪ್ರಮುಖರಾಗಿದ್ದು, ದಕ್ಷಿಣ ಕನ್ನಡ ಭಾಗದ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಹಾಗೂ ನ್ಯಾಯಕ್ಕಾಗಿ ‘ಕೊಂದವರು ಯಾರು?’ ಎಂಬ ರಾಜ್ಯಮಟ್ಟದ ಸಮಾವೇಶ ಮತ್ತು ಆಂದೋಲನವನ್ನು ಮುನ್ನಡೆಸುತ್ತಿದ್ದಾರೆ.

ಭಾರತ ಮಹಿಳಾ ಒಕ್ಕೂಟದ ರಾಜ್ಯಾಧ್ಯಕ್ಷೆಯಾಗಿರುವ ಜ್ಯೋತು ಅವರು ಓದುಗರು ಮತ್ತು ಲೇಖಕಿಯೂ ಹೌದು. ಕ್ರಾಂತಿಕಾರಿ ಭಗತ್ ಸಿಂಗ್ ಅವರ ಆಯ್ದ ಬರಹಗಳನ್ನು ‘ಇಂಕ್ವಿಲಾಬ್ ಜಿಂದಾಬಾದ್’ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ. ತಮ್ಮ ತಂದೆಯ ನಿಧನದ ನಂತರ ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ಮೂಲಕ ಸಾರಿಗೆ ಕಾರ್ಮಿಕರ ಹಿತರಕ್ಷಣೆಗಾಗಿ ಹೋರಾಟವನ್ನು ಮುಂದುವರಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...