ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸದನದಲ್ಲಿ ಸಿಎಂ ಸೇರಿ ಸದಸ್ಯರಿಂದ ಸಂತಾಪ

Date:

ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ. ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರ್ಯಾಂಡ್‌ ಹೆಸರನ್ನು ಶ್ಯಾಮನೂರರು ತಂದುಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಸಿಎಂ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ” ಎಂದು ತಿಳಿಸಿದರು.

“ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು” ಎಂದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್‌ನಲ್ಲಿ ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಮ್ಮ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.

ನೆರವಿನಹಸ್ತ ಚಾಚುತ್ತಿದ್ದರು

“ಶ್ಯಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು. ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ಹೇಳಿದರು.

“15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು ಭಗವಂತ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ” ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಸಚಿವ ಕೆ ಎಚ್‌ ಮುನಿಯಪ್ಪ, ಪ್ರತಿಪಕ್ಷದ ಸದಸ್ಯ ಎಸ್‌ ಸುರೇಶ್‌ ಕುಮಾರ್‌, ಕಾಂಗ್ರೆಸ್‌ ಸದಸ್ಯ ಶಿವಲಿಂಗೇಗೌಡ ಸೇರಿದಂತೆ ಹಲವು ಸದಸ್ಯರು ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...