ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸಾವು ವಂದತಿ: ಕೈಲಾಸದಿಂದ ಸ್ಪಷ್ಟನೆ

Date:

ಸ್ವಯಂಘೋಷಿತ ದೇವಮಾನವ, ಅತ್ಯಾಚಾರ ಆರೋಪಿ, ಕೈಲಾಸ ರಾಷ್ಟ್ರ ಕಟ್ಟಿಕೊಂಡು ಅಲ್ಲಿಯೇ ಇರುವ ನಿತ್ಯಾನಂದ ಸ್ವಾಮಿ ಸಾವನ್ನಪ್ಪಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ನಿತ್ಯಾನಂದ ಸಾವು ಕುರಿತು ‘ಕೈಲಾಸ’ವು ಸ್ಪಷ್ಟನೆ ನೀಡಿದ್ದು, ಆತ ಸತ್ತಿಲ್ಲವೆಂದು ಮಾಹಿತಿ ನೀಡಿದೆ.

- Advertisement -

ನಿತ್ಯಾನಂದ ಸ್ವಾಮಿ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರು. ಆತ, ಏಪ್ರಿಲ್ 1ರಂದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆತನ ಸಂಬಂಧಿಯಾದ ಸುಂದರೇಶ್ವರನ್ ಕೂಡ ವಿಡಿಯೋ ಬಿಡುಗಡೆ ಮಾಡಿ, ‘ನಿತ್ಯಾನಂದ ಸ್ವಾಮಿ ಹಿಂದು ಧರ್ಮದ ರಕ್ಷಣೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ’ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೀಗ, ಕೈಲಾಸ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡಿದೆ. “ನಿತ್ಯಾನಂದ ಸ್ವಾಮಿ ಸತ್ತಿಲ್ಲ. ಅವರು ಆರೋಗ್ಯವಾಗಿದ್ದಾರೆ. ಶೀಘ್ರದಲ್ಲೇ ಭಕ್ತರ ಮುಂದೆ ಬರಲಿದ್ದಾರೆ” ಎಂದು ಹೇಳಿದೆ.

2022ರಲ್ಲಿಯೂ ನಿತ್ಯಾನಂದ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹರಿದಾಡಿದ್ದವು. ಆತ, ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ಈ ವದಂತಿಗಳನ್ನು ತಳ್ಳಿಹಾಕಿದ್ದ ನಿತ್ಯಾನಂದ, ‘ತಾವು ಸತ್ತಿಲ್ಲ. ಸಮಾಧಿ ಸ್ಥಿತಿಯಲ್ಲಿದ್ದೆ ಆಳವಾದ ಧ್ಯಾನ ಮಾಡುತ್ತಿದ್ದೆನೆಷ್ಟೇ’ ಎಂದು ಹೇಳಿಕೊಂಡಿದ್ದರು.

ನಿತ್ಯಾನಂದ ಸ್ವಾಮಿ ವಿರುದ್ಧ ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ನಿತ್ಯಾನಂದನ ವಿರುದ್ಧ ಅತ್ಯಾಚಾರ, ಅಪಹರಣ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳೂ ಇವೆ. ವಿವಿಧ ಪ್ರಕರಣಗಳ ಆರೋಪಿಯಾಗಿರುವ ನಿತ್ಯಾನಂದ 2019ರಲ್ಲಿ ಭಾರತದಿಂದ ಪಲಾಯನ ಮಾಡಿದ್ದರು. 2020ರಲ್ಲಿ ಹಿಂದು ಸಾರ್ವಭೌಮ ರಾಷ್ಟ್ರ ‘ಕೈಲಾಸ’ ಸ್ಥಾಪನೆ ಮಾಡಿದ್ದೇನೆ. ಭಾರತೀಯರಿಗೆ ಉಚಿತವಾಗಿ ವೀಸಾ ನೀಡುತ್ತೇನೆ ಎಂದು ಘೋಷಿಸಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...