ರಾಜ್ಯದಲ್ಲಿ ವೋಟ್ ಚೋರಿ ಮಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಕುಮಾರಸ್ವಾಮಿ ಆರೋಪ

Date:

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

- Advertisement -

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಿಜೆಪಿ ವೋಟ್ ಚೋರಿಯಿಂದಲೇ ಗೆದ್ದಿದೆ ಸಿಎಂ, ಡಿಸಿಎಂ ಆರೋಪ ಮಾಡಿರುವುದು ಸರಿಯಲ್ಲ. ನಿಜಕ್ಕೇ ಆರೋಪ ಮಾಡಿರುವವರೇ ವೋಟ್ ಚೋರಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಅಧಿಕಾರಕ್ಕೆ ಬಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸೀಟು ಬರುತ್ತೆ ಎಂದು ಅಷ್ಟು ನಿಖರವಾಗಿ ಹೇಗೆ ಹೇಳಿದರು? ಆ ಸಂಖ್ಯೆ ಅವರಿಗೆ ಹೇಗೆ ಗೊತ್ತಿತ್ತು? ಯಾವ ಆಧಾರದಲ್ಲಿ 136 ಸೀಟು ಬರುತ್ತೆ ಅಂತ ಹೇಳಿದರು? ಮತ ಕಳ್ಳತನ ಮಾಡಿರುವುದೇ ಕಾಂಗ್ರೆಸ್ ಪಕ್ಷ. ಈಗ ನೋಡಿದರೆ ಮೋದಿ ಅವರನ್ನು ಟೀಕೆ ಮಾಡುತ್ತಿದೆ” ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

“ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿಗೆ 67 ಸೀಟು ಬಂದು ನಿಲ್ಲೋಕೆ ಚೋರಿ ಚೋರಿ ಮಾಡಿದ್ರಾ? ಕಾಂಗ್ರೆಸ್ ನವರು ಜನರನ್ನು ಯಾಮಾರಿಸಿ ಈ‌ ರೀತಿಯ ವ್ಯರ್ಥ ಹೇಳಿಕೆ ಕೊಟ್ಟು ಸಮಯ ವ್ಯರ್ಥ ಮಾಡುತ್ತಿದ್ದಾರೆ. ರಾಜ್ಯದಲಿ ಅನೇಕ ಗಂಭೀರ ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ. ಅದರ ಬಗ್ಗೆ ಇವರ ಗಮನ ‌ಇರಬೇಕು” ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

“ಸಿಎಂ, ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಅಂತ ಯಾರೋ ಹೇಳಿದರು. ನಾನೇನೋ ಯಾವುದೋ ಭಾರೀ ವಿಷಯ ಇರಬೇಕು ಎಂದುಕೊಂಡಿದ್ದೆ. ಆದರೆ ಸತ್ಯವಲ್ಲದ ವೋಟ್ ಚೋರಿ ಬಗ್ಗೆ ಇವರಿಬ್ಬರೂ ಮಾಧ್ಯಮಗೋಷ್ಠಿ ನಡೆಸಿರುವುದು ಸಣ್ಣತನ ಅಷ್ಟೇ. ಸಿಎಂ,‌ಡಿಸಿಎಂ ಸಣ್ಣತನವನ್ನು ರಾಜ್ಯದ ಜನರು ನೋಡಿದ್ದಾರೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ‌ಇಂತಹ ವಿಷಯ ಇಟ್ಟುಕೊಂಡು ಹೋಗ್ತಾ ಇದ್ದಾರೆ. ಕಾಂಗ್ರೆಸ್ ನವರನ್ನು ನಾಡಿನ ಜನ ಶಾಶ್ವತವಾಗಿ ಮನೆಗೆ ‌ಕಳಿಸುವ ದಿನ ದೂರ ಉಳಿದಿಲ್ಲ” ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

“ರಾಜ್ಯದ ಖಜಾನೆ ಖಾಲಿ ಆಗಿದೆ. ಖಾಲಿ ಆಗಿರುವ ಖಜಾನೆ ಹೇಗೆ ತುಂಬಿಸಬೇಕು ಅಂತ ನಿನ್ನೆ (ಶುಕ್ರವಾರ) ಸಭೆ ಮಾಡಿದ್ದಾರೆ. ಜನರ ಮೇಲೆ ಪದೇ ಪದೇ ತೆರಿಗೆ ವಿಧಿಸುವ ಮೂಲಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾವಾಗಲೂ ಜನರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಅನೇಕ ಬಾರಿ ಹೇಳಿದ್ದೇನೆ. ತಪ್ಪು ತಿದ್ದಿಕೊಂಡು ಕೆಲಸ ಮಾಡಿ ಅಂತ. ಆದರೂ ಅವರಿಗೆ ಬುದ್ದಿ ಬಂದಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....