ವೋಟ್‌ ಚೋರಿ ನೆಪದಲ್ಲಿ ಕಾಂಗ್ರೆಸ್ ಸುಳ್ಳು ಸಂಕಥನ ಸೃಷ್ಟಿ:‌ ರಾಜ್ಯಸಭೆಯಲ್ಲಿ ಹೆಚ್‌ ಡಿ ದೇವೇಗೌಡ ಆರೋಪ

Date:

ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಎಚ್ಚರಿಕೆ ನೀಡಿದರು.

- Advertisement -

ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಹೋದರೆ, ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದು ಮಾಡುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ‘ವೋಟ್ ಚೋರಿ’ ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ” ಎಂದು ದೇವೇಗೌಡರು ಕಟುವಾದ ಶಬ್ದಗಳಲ್ಲಿ ತಿಳಿಸಿದರು.

ʼವೋಟ್ ಚೋರಿʼ ಎಂಬ ಅಪಪ್ರಚಾರದ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೂಷಿಸುವ ಮೂಲಕ ಮತ್ತು ಮತದಾರರ ಮನಸ್ಸಿನಲ್ಲಿ ಅನುಮಾನವನ್ನು ಸೃಷ್ಟಿಸುವ ಮೂಲಕ ಪ್ರತಿಪಕ್ಷಗಳು ಏನು ಗಳಿಸಲಿವೆ? ನಿಮ್ಮ ಮನಸ್ಸಿಗೆ ಏನಾಗಿದೆ? ಏನಾದರೂ ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳಿ. ನಾನು ಏಳು ದಶಕಗಳಿಗೂ ಹೆಚ್ಚಿನ ಸಾರ್ವಜನಿಕ ಜೀವನದಲ್ಲಿ ಚುನಾವಣೆಯಲ್ಲಿ ಸೋಲು ಗೆಲುವನ್ನು ಎದುರಿಸಿದ್ದೇನೆ. ನಾನು ಎಂದಿಗೂ ಮತಗಳ್ಳತನದ ಅಂತಹ ವಿಷಯಗಳನ್ನು ಹೇಳಲಿಲ್ಲ” ಎಂದು ಒತ್ತಿ ಹೇಳಿದರು.

ಕೇರಳದಲ್ಲಿ 18,000 ಮತದಾರರ ಸೇರ್ಪಡೆಗೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬರೆದ ಪತ್ರವನ್ನು ಅವರು ಉಲ್ಲೇಖಿಸಿ “ನಾನು ಇದನ್ನು ಏಕೆ ಹೇಳುತ್ತಿದ್ದೇನೆಂದರೆ ನೆಹರು ಅವಧಿಯಲ್ಲಿಯೂ ಸಹ ಚುನಾವಣಾ ವ್ಯವಸ್ಥೆಯಲ್ಲಿ ಕೆಲವು ಲೋಪಗಳು ಇದ್ದವು” ಎಂದರು.

“ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಪ್ರಸ್ತಾಪಿಸಿಯೂ ಕಾಂಗ್ರೆಸ್ ಪಕ್ಷವು ಇತ್ತೀಚಿಗೆ ಬಿಹಾರ ಚುನಾವಣೆಯಲ್ಲಿ ಸೋಲು ಎದುರಿಸಿತು . ಮತದಾರರ ಪಟ್ಟಿಯ ಕೂಲಂಕಶ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ಎಂಬುದನ್ನು ಸ್ವತಃ ಪ್ರತಿಪಕ್ಷ ನಾಯಕರು ಆಲೋಚಿಸಬೇಕು. ಆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಆರು ಶಾಸಕರು ಸಿಕ್ಕಿದ್ದಾರೆ” ಎಂದು ಟೀಕಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ಪ್ರಧಾನಿಗಳ ವಿರುದ್ಧ ಪ್ರತಿಪಕ್ಷಗಳು ಆರೋಪಗಳನ್ನು ಮಾಡಲು ಅವರು ಏಕೆ ಬಯಸುತ್ತಾರೆ ಎಂದು ಪ್ರಶ್ನಿಸಿ, “ದೇಶದಲ್ಲಿ ಚುನಾವಣಾ ಆಯೋಗವಿದೆ, ಸುಪ್ರೀಂ ಕೋರ್ಟ್ ಇದೆ. ಈ ಎಲ್ಲ ವಿಷಯಗಳನ್ನು ಸರಿಪಡಿಸಲು ಚುನಾವಣಾ ಆಯೋಗವು ಎಲ್ಲ ರಾಜ್ಯ ಘಟಕಗಳಿಗೆ ನಿರ್ದೇಶನ ನೀಡಿದೆ. ರಾಷ್ಟ್ರದ ಜನರು ನರೇಂದ್ರ ಮೋದಿ ಅವರ ಸರಕಾರದ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ ಮತ್ತು ಮುಂದಿನ ಲೋಕಸಭೆ ಚುನಾವಣೆಯ ನಂತರವೂ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ” ಎಂದು ದೇವೇಗೌಡರು ಭವಿಷ್ಯ ನುಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....

 ‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’...

ಓಲಾ, ಉಬರ್ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯ: ಸಾರಿಗೆ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...