‘ನಮ್ಮ ದಲಿತ ನಾಯಕ’ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲ್ಲ ಎಂದ ಕಾಂಗ್ರೆಸ್

Date:

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿದೆ. ವಿಪಕ್ಷಗಳ ಈ ಬೇಡಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ದಲಿತ ನಾಯಕ, ಅವರು ರಾಜೀನಾಮೆ ನೀಡಲ್ಲ ಎಂದು ತಿಳಿಸಿದೆ.

- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಬಿಜೆಪಿಯ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ತಿಳಿದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಗುತ್ತಿಗೆದಾರ ಸಚಿನ್ ಆತ್ಮಹತ್ಯೆ | ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

“ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ನಮಗೆ ತಿಳಿದಿದೆ, ತನಿಖೆ ನಡೆಯುತ್ತಿದೆ. ಯಾರೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಪ್ರಿಯಾಂಕ್ ಖರ್ಗೆ ನಮ್ಮ ದಲಿತ ನಾಯಕ. ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಸಾಧ್ಯವಿಲ್ಲ. ಸಿಬಿಐ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನಮಗೆ ತಿಳಿದಿದೆ. ನಮ್ಮ ಪೊಲೀಸರು ಮತ್ತು ಅಧಿಕಾರಿಗಳು ತನಿಖೆ ಮಾಡಲು ಸಮರ್ಥರಾಗಿದ್ದಾರೆ” ಎಂದು ತಿಳಿಸಿದರು.

ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಕಾರಣ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಆಗ್ರಹಿಸಿದೆ. ಆದರೆ “ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ, ನಾನು ಮಾತ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಹಾಗೆಯೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬುದು ವಿಪಕ್ಷಗಳ ಆಗ್ರಹವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...