ಕಾಂಗ್ರೆಸ್‌ಗೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆಯೇ ಇಲ್ಲ: ಬಿ ವೈ ವಿಜಯೇಂದ್ರ

Date:

  • ‘ಕಾಂಗ್ರೆಸ್ ಗೌರವಯುತವಾಗಿ ಅಂಬೇಡ್ಕರ್‌ ಅವರ ಶವಸಂಸ್ಕಾರ ಮಾಡಿಲ್ಲ’
  • ‘ಮೋದಿ ಅವರು ಅಂಬೇಡ್ಕರ್ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ’

ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ. ಡಾ.ಅಂಬೇಡ್ಕರ್ ಹೆಸರನ್ನು ನುಡಿಮುತ್ತಾಗಿ ಬಳಸುವ ಕಾಂಗ್ರೆಸ್ ಗೌರವಯುತವಾಗಿ ಅವರ ಶವಸಂಸ್ಕಾರವನ್ನೂ ಮಾಡಿಲ್ಲ. ಕಾಂಗ್ರೆಸ್‌ಗೆ ಬಾಬಾಸಾಹೇಬ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹರಿಹಾಯ್ದರು.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಎಸ್‍ಸಿ ಮೋರ್ಚಾ ಏರ್ಪಡಿಸಿದ್ದ “ಸಂವಿಧಾನ ಸಮರ್ಪಣಾ ದಿನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ನೆಹರೂ ಸ್ಮಾರಕಕ್ಕೆ 30 ಎಕರೆ, ಇಂದಿರಾ ಗಾಂಧಿ ಅವರ ಸ್ಮಾರಕಕ್ಕೆ 20 ಎಕರೆ ನೀಡಿದ್ದರು. ಆದರೆ, ಸಂವಿಧಾನ ನೀಡಿದ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ? ಮೋದಿಜೀ ಅವರು ಅಂಬೇಡ್ಕರ್ ಅವರ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ” ಎಂದು ತಿಳಿಸಿದರು.

“ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಬಿಜೆಪಿಯವರಿಗೆ ಇಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. 26 ನವೆಂಬರ್ ಅನ್ನು ಸಂವಿಧಾನ ಸಮರ್ಪಣಾ ದಿನ ಎಂದು ಘೋಷಿಸುವ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದೇ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು. ಬಿಜೆಪಿ ಉದ್ದೇಶವೇ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ನೀಡುವುದು” ಎಂದರು.

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂದು ಮಹತ್ವದ ದಿನ. 1949 ನವೆಂಬರ್ 26 ರಂದು ಭಾರತೀಯರಿಗೆ ಪವಿತ್ರವಾದ ಸಂವಿಧಾನವನ್ನು ಅಂಗೀಕರಿಸಿದ ದಿನ. ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಮತ್ತು ದೂರದೃಷ್ಟಿಯು ಈ ನಮ್ಮ ಸಂವಿಧಾನವನ್ನು ರಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ” ಎಂದು ತಿಳಿಸಿದರು.

“ಸಿದ್ದರಾಮಯ್ಯನವರು ಮತಬ್ಯಾಂಕ್ ರಾಜಕೀಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಬಾಸಾಹೇಬರ ಆಶಯವನ್ನು ಮೋದಿಜೀ ಅವರು ಅನುಷ್ಠಾನ ಮಾಡುತ್ತಿದ್ದಾರೆ. ಸಂವಿಧಾನವನ್ನು ಉಳಿಸುವ ಮಹತ್ವದ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲೂ ಇದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ, ‘ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಅಂಬೇಡ್ಕರ್ ಅವರು ಬಯಸಿದಂತೆ ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಬಡತನ, ಮೂಢನಂಬಿಕೆ, ಶಿಕ್ಷಣ ವಂಚಿತರಾಗಿರುವ ದಲಿತರನ್ನು ಮೇಲೆತ್ತುವ ಕೆಲಸವನ್ನು ಯಾವತ್ತೂ ಕಾಂಗ್ರೆಸ್ ಮಾಡಲಿಲ್ಲ” ಎಂದು ತಿಳಿಸಿದರು.

“ಸಿದ್ದರಾಮಯ್ಯನವರು ಅಕ್ಕಿ ಕೊಡ್ತೀನಿ, ಬ್ಯಾಳಿ ಕೊಡ್ತೀನಿ, ಕೋಳಿ, ಕುರಿ ಕೊಡ್ತೀನಿ ಎನ್ನುತ್ತಾರೆ. 140 ಕೋಟಿಯಲ್ಲಿ ಶೇ 25 ದಲಿತರಿರುವ ನಾವು ನಮಗೆ ಕೋಳಿ, ಕುರಿ, ಅಕ್ಕಿ ಬೇಡ; ಶಿಕ್ಷಣ ಕೊಡಿ ಎಂದು ಒತ್ತಾಯಿಸಬೇಕು” ಎಂದು ಕಿವಿಮಾತು ಹೇಳಿದರು.

ಸಿ ಟಿ ರವಿ ಮಾತನಾಡಿ, “2015ರವರೆಗೂ ನವೆಂಬರ್ 26ರ ದಿನವನ್ನು ಲಾಡೆ ಎಂದು ಕರೆಯುತ್ತಿದ್ದರು. ಸಂವಿಧಾನ ಗೌರವ ದಿನ ಎಂದು ಅದನ್ನು ಆಚರಿಸಲು ನರೇಂದ್ರ ಮೋದಿಜೀ ಅವರು ತಿಳಿಸಿದರು. ಭಾರತ ರತ್ನವನ್ನು ಅವರಿಗೆ ಅವರೇ ಕೊಟ್ಟುಕೊಂಡರು. ನೈಜ ಭಾರತರತ್ನ ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನು ಹಲವು ದಶಕಗಳ ಬಳಿಕ ಅಟಲ್‍ಜೀ ಅವರ ಪ್ರಸ್ತಾವನೆಯ ನಂತರ ಪ್ರಧಾನಿ ವಿ.ಪಿ.ಸಿಂಗ್ ಅವರು ಬಿಜೆಪಿ ಬೆಂಬಲದ ಸರಕಾರ ಇದ್ದಾಗ ನೀಡಿದ್ದರು” ಎಂದು ನೆನಪಿಸಿದರು.

ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಧರ್ಮದ ಮುಂದುವರೆದ ಭಾಗವೇ ಸಂವಿಧಾನ. ಧರ್ಮವನ್ನು ಹೊರತುಪಡಿಸಿದ ಸಂವಿಧಾನ ನಮ್ಮ ದೇಶದಲ್ಲಿ ಇಲ್ಲ” ಎಂದು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...