ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ: ಆರ್‌ ಅಶೋಕ್‌ ಟೀಕೆ

Date:

Advertisements

ಸಾರ್ವಜನಿಕ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಡೆಯಲು ಕೈಎತ್ತಿದ್ದರಿಂದ ಅವಮಾನಕ್ಕೆ ಒಳಗಾಗಿರುವುದಾಗಿ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ.

ಈ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆಯಾಗಿದೆ. ಸಿದ್ದರಾಮಯ್ಯ ಅವರ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ” ಎಂದು ಟೀಕಿಸಿದ್ದಾರೆ.

Advertisements

“ಸಿಎಂ ಸಿದ್ದರಾಮಯ್ಯ ನವರೇ, ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತಾಳವೋ, ಅದನ್ನು
ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ” ಎಂದಿದ್ದಾರೆ.

“ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ...

Download Eedina App Android / iOS

X