ಕಾಂಗ್ರೆಸ್‌ನವರು ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ: ಆರ್‌ ಅಶೋಕ್‌ ವಾಗ್ದಾಳಿ

Date:

Advertisements

ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದರು.

ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100ರ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷ ಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್‌ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ” ಎಂದು ದೂರಿದರು.

Advertisements

“ವಕ್ಫ್‌ ಮಂಡಳಿ ಲಕ್ಷಾಂತರ ದಲಿತರ ಆಸ್ತಿಗಳನ್ನು ಲೂಟಿ ಮಾಡಿದೆ. ವಕ್ಫ್‌ನಿಂದಾದ ಭೂ ಕಬಳಿಕೆ ಬಗ್ಗೆ ನಾನು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ, ದೂರು ಹೇಳಿಕೊಳ್ಳಲು ಬರುತ್ತಿದ್ದವರಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಿದ್ದರು. ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ಕಾಂಗ್ರೆಸ್‌ ನಿಂತುಕೊಳ್ಳುತ್ತದೆ ಎಂಬುದರಲ್ಲೇ ಅವರ ದಲಿತರ ಕಾಳಜಿ ಅರ್ಥವಾಗುತ್ತದೆ. ಸಂವಿಧಾನ ಉಳಿಯಬೇಕು, ಕಾಂಗ್ರೆಸ್‌ನ ಪೊಳ್ಳು ಭರವಸೆಗಳು ಹೋಗಬೇಕು” ಎಂದರು.

ಜಾತಿ ಗಣತಿ ವೈಜ್ಞಾನಿಕವಲ್ಲ

“ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ ನಡುವೆ ವಿಷಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ” ಎಂದು ಹೇಳಿದರು.

“ಗುತ್ತಿಗೆದಾರರು ಕಮಿಷನ್‌ ಆರೋಪ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಸಭೆ ಮಾಡಿ ಚರ್ಚಿಸಲಿ. ಯಾವ ಖಾತೆಗಳಲ್ಲಿ ಎಷ್ಟು ಲೂಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಮಿಷನ್‌ ಕೊಡುವವರಿಗೆ ಬಿಲ್‌ ಪಾವತಿಯಾಗುತ್ತದೆ. ಅಬಕಾರಿ ಇಲಾಖೆಯಲ್ಲಿ ಸಚಿವರ ಮಗ ಲೂಟಿ ಮಾಡುತ್ತಿದ್ದಾರೆ. ಸಚಿವರ ಮೇಲೆ ಇಷ್ಟೆಲ್ಲ ಆರೋಪ ಬಂದರೂ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಾರೆ. ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್‌ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೇ ಇರಲು ಕಮಿಷನ್‌ ವಸೂಲಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಲು ಕಮಿಷನ್‌ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಷನ್‌ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್‌ ಸೆಂಟರ್‌ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ” ಎಂದು ದೂರಿದರು.

“ಜೆಡಿಎಸ್‌ನ ಹೋರಾಟಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಯಾವ ಹೋರಾಟ ಒಟ್ಟಿಗೆ ಮಾಡಬೇಕು, ಪ್ರತ್ಯೇಕ ಮಾಡಬೇಕೆಂದು ಎಚ್‌.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಲಾಗುವುದು. ನಮ್ಮ ಅವರ ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X