ಪ್ರಕೃತಿ ವಿಕೋಪ ಅಲರ್ಟ್‌ ಮೆಸೇಜ್‌ಗೆ ಗಲಿಬಿಲಿಗೊಂಡ ಕಾಂಗ್ರೆಸ್‌ ನಾಯಕರು

Date:

  • ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಲಿಬಿಲಿ
  • ಕಾರ್ಯಕ್ರಮ ನಡೆಯುವ ವೇಳೆ ಏಕಕಾಲದಲ್ಲಿ ಎಲ್ಲರ ಮೊಬೈಲ್‌ಗೂ ಬಂತು ಮೆಸೇಜ್

ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಮಾಹಿತಿ ನೀಡುವ ಸಲುವಾಗಿ ದೂರ ಸಂಪರ್ಕ ಇಲಾಖೆಯ ಜೊತೆಗೂಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕರ್ನಾಟಕದಲ್ಲಿ ನಡೆಸುತ್ತಿರುವ ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಮೆಸೇಜ್ ಪರೀಕ್ಷೆ ಕಾಂಗ್ರೆಸ್ ನಾಯಕರನ್ನು ಕ್ಷಣಕಾಲ ಗಲಿಬಿಲಿಗೊಳಿಸಿತು.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಏಕಕಾಲದಲ್ಲಿ ಪ್ರಕೃತಿ ವಿಕೋಪ ಅಲರ್ಟ್ ಟ್ರಯಲ್ ಮೆಸೇಜ್ ಬಂತು. ಏಕಕಾಲದಲ್ಲಿ ಎಲ್ಲರಿಗೂ ಮೆಸೇಜ್ ಬಂದ ಹಿನ್ನೆಲೆಯಲ್ಲಿ ವೇದಿಕೆಯಲ್ಲಿದ್ದ ನಾಯಕರು ಕೊಂಚ ಗಲಿಬಿಲಿಗೆ ಒಳಗಾದರು.

ಆಗ ಮಾಧ್ಯಮಪ್ರತಿನಿಧಿಗಳು, ಈ ಶಬ್ದ ವಿಕೋಪ ಮಾಹಿತಿ ಅಲಾರಾಮ್ ಎಂದು ತಿಳಿಸಿದ್ದು ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟರು. ಈ ವೇಳೆ ಭಾಷಣ ಮಾಡುತ್ತಿದ್ದ ಡಿಕೆ ಶಿವಕುಮಾರ್ ಅವರು, ಬಿಜೆಪಿಯವರೂ ಅಲರ್ಟ್ ಆಗಲಿ ಬಿಡಿ ಎಂದು ನಗೆಚಟಾಕಿ ಹಾರಿಸಿದರು.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇಂದು ಪ್ರಾಕೃತಿಕ ದುರಂತದ ಮಾಹಿತಿ ನೀಡುವ ‘ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್’ ಪರೀಕ್ಷೆ

ಈ‌ ವೇಳೆ ವೇದಿಕೆಯಲ್ಲಿದ್ದ ಮಾಜಿ‌ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಇತರ ಕೆಲವರು ಅಲರ್ಟ್ ಮೆಸೇಜ್ ಬಗ್ಗೆ ಮಾಹಿತಿ ನೀಡಿದರು. ನೈಸರ್ಗಿಕ ವಿಕೋಪ ಇತ್ಯಾದಿ ತುರ್ತು ಸಂದರ್ಭಗಳಲ್ಲಿ ಜನಸಾಮಾನ್ಯರಿಗೆ ಅಲರ್ಟ್ ಆಗಿರಲು ದೂರಸಂಪರ್ಕ ಇಲಾಖೆ ಮೂಲಕ ಎಲ್ಲರ ಮೊಬೈಲ್​ಗಳಿಗೆ ಈ ತುರ್ತು ಸಂದೇಶಗಳನ್ನು ಕಳುಹಿಸಲಾಗಿದೆ.

ಏನಿದು ಅಲರ್ಟ್ ಮೆಸೇಜ್?

ಪ್ರಾಕೃತಿಕ ವಿಪತ್ತುಗಳ ಸಮಯದಲ್ಲಿ ತುರ್ತು ಸಂವಹನವನ್ನು ಹೆಚ್ಚಿಸಲು ಮತ್ತು ನಮ್ಮ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ದೂರಸಂಪರ್ಕ ಇಲಾಖೆಯು ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಏಕಕಾಲದಲ್ಲಿ ಅಲರ್ಟ್ ಮೆಸೇಜ್ ಬರುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...