ಕಾಂಗ್ರೆಸ್ ಶಾಸಕಾಂಗ ಸಭೆ | ಲೋಕಸಭೆಗೆ ಸನ್ನದ್ಧರಾಗಲು ಸಿದ್ದರಾಮಯ್ಯ ಸೂಚನೆ

Date:

  • ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಸಿಎಂ ಘೋಷಣೆ
  • ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ

ಬೆಳಗಾವಿಯ ಬೆಳಗುಂದಿ ಶೂನ್ಯಫಾರಂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ರಾತ್ರಿ ನಡೆದಿದ್ದು, ಲೋಕಸಭಾ ಚುನಾವಣೆ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

- Advertisement -

ಮುಖ್ಯಮಂತ್ರಿಗಳೂ ಮತ್ತು ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲ ರೀತಿಯಲ್ಲೂ ಸಿದ್ಧರಾಗುವಂತೆ ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಘೋಷಿಸಿದ ‘ಗ್ಯಾರಂಟಿ’ ಯೋಜನೆಗಳು ಯಶಸ್ವಿಯಾಗಿವೆ. ಈ ಯೋಜನೆಗಳ ಬಗ್ಗೆ ಜನವರಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮತ್ತು ವಿಧಾನಸಭಾ ಕ್ಷೇತ್ರವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ‘ಗ್ಯಾರಂಟಿ’ ಯೋಜನೆಗಳ ಪ್ರಯೋಜನದ ಪಡೆದ ಫಲಾನುಭವಿಗಳನ್ನು ಒಂದೆಡೆ ಸೇರಿಸಬೇಕು. ಆ ಮೂಲಕ, ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು” ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

“ಗ್ಯಾರಂಟಿಗಳ ಬಗ್ಗೆ ಪಂಚಾಯತಿ ಮಟ್ಟದಲ್ಲಿ ಸಮಾವೇಶ ಮಾಡಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡುವ ಮೂಲಕ ಜನರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು” ಎಂದು ತಿಳಿಸಿದ್ದಾರೆ.

“ಬೂತ್ ಮತ್ತು ಬ್ಲಾಕ್ ಮಟ್ಟದಲ್ಲಿ ಹೆಚ್ಚೆಚ್ಚು ಕೆಲಸ ಮಾಡುವ ಮೂಲಕ ಪಕ್ಷವನ್ನು ಬಲಗೊಳಿಸಬೇಕು. ಆಯಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ತಂದುಕೊಡುವಂತೆ ಪ್ರಯತ್ನ ನಡೆಸಬೇಕು. ಆದಷ್ಟು ಬೇಗ ಸಂಭಾವ್ಯ ಅಭ್ಯರ್ಥಿಗಳ ವರದಿ ಸಿದ್ದಪಡಿಸಿ ಕೆಪಿಸಿಸಿಗೆ ರವಾನಿಸುವಂತೆ” ಸಿಎಂ ಸೂಚನೆ ನೀಡಿದ್ದಾರೆ.

₹25 ಕೋಟಿ ವಿಶೇಷ ಅನುದಾನ

“ಕಳೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಅದಕ್ಕೆ ಎಲ್ಲ ಶಾಸಕರು ಮುಖ್ಯಮಂತ್ರಿ ಅವರನ್ನು ಅಭಿನಂದಿಸಿದರು. ಮುಂದಿನ ಬಜೆಟ್‌ ಬಳಿಕ ಎಲ್ಲ ಶಾಸಕರ ಬೇಡಿಕೆಗಳ ಬಗ್ಗೆ ವಿಶೇಷ ಗಮನಹರಿಸಲಾಗುವುದು. ಅಲ್ಲದೆ ಇನ್ನಷ್ಟು ವಿಶೇಷ ಅನುದಾನ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

“ಈ ಹಿಂದಿನ ಸಭೆಯಲ್ಲಿ ಮಾತನಾಡಲು ಅವಕಾಶ ಸಿಗದ ಕೆಲವು ಶಾಸಕರು ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಹೇಳಿಕೊಂಡರು. ಕ್ಷೇತ್ರದಲ್ಲಿ ಮನೆಗಳನ್ನು ಹಂಚಿಕೆ ಮಾಡಿಲ್ಲ ಎಂದು ಶಾಸಕರು ಅಹವಾಲು ತೋಡಿಕೊಂಡರು. ಆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು” ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅಸಮಾಧಾನ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಶರಣಪ್ರಕಾಶ್ ಪಾಟೀಲ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಶರಣಬಸಪ್ಪ ದರ್ಶನಾಪುರ್ ಸೇರಿದಂತೆ ಕೆಲ ಸಚಿವರ ಗೈರಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವರು, ಶಾಸಕರ ನಡುವೆ ಸಮನ್ವಯತೆಗಾಗಿ ಇರುವ ಶಾಸಕಾಂಗ ಸಭೆಗೆ ಸಚಿವರೇ ಗೈರಾದರೆ ಹೇಗೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜು, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್ ಅವರು ಕಾಂಗ್ರೆಸ್‌ ಶಾಸಕಾಂಗ ಸಬೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...