ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

Date:

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರನ್ನು ಆ.28ರ ವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ವಶಕ್ಕೆ ನೀಡಿ ಬೆಂಗಳೂರಿನ 35ನೇ ಸಿಸಿಎಚ್‍ನ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ಇಂದು ಆದೇಶ ಹೊರಡಿಸಿದ್ದಾರೆ.

- Advertisement -

ಬೆಟ್ಟಿಂಗ್ ಪ್ರಕರಣದಲ್ಲಿ ತೊಡಗಿರುವ ಆರೋಪದ ಮೇಲೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರನ್ನು ಈಡಿ. ಅಧಿಕಾರಿಗಳು ಆ.22ರಂದು ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಿ, ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ, ಬೆಂಗಳೂರಿನ 35ನೇ ಸಿಸಿಎಚ್ ಕೋರ್ಟ್‍ನಲ್ಲಿ ವಿಚಾರಣೆಗೆ ಒಳಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೆ ಸಿ ವೀರೇಂದ್ರ ಪಪ್ಪಿ ಅವರ ಬಳಿ 25 ಕೋಟಿ ರೂಪಾಯಿಗಳಿಗೆ ಅಧಿಕ ಮೊತ್ತದ ನಗದು, ವಿದೇಶಿ ಕರೆನ್ಸಿ, ಕೆ.ಜಿ.ಗಟ್ಟಲೇ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ. ಅವರು ವಿದೇಶದಲ್ಲಿ ವ್ಯವಹಾರ ನಡೆಸುತ್ತಿರುವುದು ದೃಢವಾಗಿದೆ. ಕ್ಯಾಸಿನೋಗಳು, ಆನ್‍ಲೈನ್ ಬೆಟ್ಟಿಂಗ್ ಸೈಟ್‍ಗಳ ವ್ಯವಹಾರ ನಡೆಸಿದ್ದಾರೆ. ಕೋಟ್ಯಾಂತರ ರೂ.ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದ್ದು, ಅವರನ್ನು 14 ದಿನಗಳ ಕಾಲ ಈಡಿ ವಶಕ್ಕೆ ನೀಡಬೇಕು ಎಂದು ಇ.ಡಿ ಪರ ವಕೀಲರು ನ್ಯಾಯಾಲಯವನ್ನು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಆದರೆ, ಕೆ ಸಿ ವೀರೇಂದ್ರ ಪಪ್ಪಿ ಅವರನ್ನು ಇ.ಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ.ವೀರೇಂದ್ರ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ಅವರು, ಕೆ.ಸಿ. ವೀರೇಂದ್ರ ಅವರನ್ನು ಆ.28ರ ವರೆಗೆ ಇ.ಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಪ್ರಕರಣ: ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸೋದರರು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿರುವ ಆರೋಪದ ಮೇಲೆ ಅವರಿಗೆ ಸಂಬಂಧಿಸಿ ದೇಶದ 31 ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳ ತಂಡವು ಶೋಧ ನಡೆಸಿತ್ತು. ಸುಮಾರು 1ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ, ಅಂದಾಜು 6ಕೋಟಿ ರೂ.ಮೌಲ್ಯದ ಚಿನ್ನಾಭರಣಗಳು, ಸುಮಾರು 10 ಕೆ.ಜಿ. ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳು ಸೇರಿ 12ಕೋಟಿ ರೂ. ನಗದನ್ನು ಆರೋಪಿಗಳಿಂದ ವಶಪಡಿಸಿಕೊಂಡು, ವಿಚಾರಣೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....