ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ದಾವಣಗೆರೆಯ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಬದ್ಧ ಅನುದಾನ ದೊರೆತಿಲ್ಲ
ಸಾಲದ ರಾಮಯ್ಯ ಎಂದು ತನ್ನನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್‌ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ ಶೇ 10 ರಷ್ಟು ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಅಸ್ಸಾಂ ಅಖಾಡ | ‘ಸುಗಂಧ ರಾಜ’ನಿಗೆ ಅಗ್ನಿಪರೀಕ್ಷೆ; AIUDFನಿಂದ ಕೈ ಜಾರುತ್ತಿರುವ ಮುಸ್ಲಿಂ ಮತದಾರರು

ಗ್ಯಾರಂಟಿಗಳಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ
ಮಾಜಿ ಸಿಎಂ ಬೊಮ್ಮಾಯಿಯವರು ರಾಜ್ಯದ ಸಾಲದ ದಾಖಲೆಗಳನ್ನು ಸರ್ಕಾರ ನೀಡಲೆಂದು ಹೇಳಿರುವ ಬಗ್ಗೆ ಉತ್ತರಿಸಿ, ಆರ್ಥಿಕತೆಯ ಸ್ಥಿತಿಗತಿಗಳ ಎಲ್ಲ ಅಂಶಗಳ ದಾಖಲೆಗಳನ್ನು ಬಜೆಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯವರ ಅವಧಿಯಲ್ಲಿ 53,0000 ಕೋಟಿ ಸಾಲ ಮಾಡಲಾಗಿದೆ. ಗ್ಯಾರಂಟಿ ಯೋಜನೆಯು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿ , ಇದರಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ ಎಂದರು.

ಗುತ್ತಿಗೆದಾರರ ಬಾಕಿ ಬಿಲ್ಲು ಪಾವತಿಸಲಾಗುತ್ತಿದೆ
ಗುತ್ತಿಗೆದಾರರಿಗೆ ಬಾಕಿ ಪಾವತಿ ಆಗದಿರುವ ಬಗ್ಗೆ ಪ್ರತಿಕ್ರಿಯೆಗಳು ಎದ್ದಿರುವ ಬಗ್ಗೆ ಉತ್ತರಿಸಿ, ಬಿಜೆಪಿಯವರ ಅವಧಿಯಲ್ಲಿ ಗುತ್ತಿಗೆದಾರರ 29 ಸಾವಿರ ಕೋಟಿಯಷ್ಟು ಬಾಕಿ ಉಳಿಸಲಾಗಿತ್ತು. ಅದರಲ್ಲಿ 24 ಸಾವಿರ ಕೋಟಿ ಬಾಕಿ ಬಿಲ್ಲು ಪಾವತಿಸಲಾಗಿದೆ. ಈ ಬಗ್ಗೆ ದಾಖಲಾತಿಯ ಆಧಾರದಲ್ಲಿ ಸ್ಪಷ್ಟ ಉತ್ತರವನ್ನು ಅಧಿವೇಶನದಲ್ಲಿ ನೀಡಲಾಗಿದೆ ಎಂದರು.

ಬೆಲೆ ಏರಿಕೆ ನಿಯಂತ್ರಿಸುವುದು ಕೇಂದ್ರದ ಹೊಣೆಗಾರಿಕೆ
ಇರಾನ್ ಯುದ್ಧ ಪರಿಣಾಮ ಬೆಲೆಏರಿಕೆಗೆ ರಾಜ್ಯ ಸರ್ಕಾರದ ಸಿದ್ದತೆಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು. ಕೇಂದ್ರ ಪೂರೈಸುವ ಗ್ಯಾಸ್ ಪೆಟ್ರೋಲ್ ಡೀಸೆಲ್‌ಗಳನ್ನು ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆಗಳು ಕಡಿಮೆಯಿದೆ ಎಂದರು.

ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ
ಒಳಮೀಸಲಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅಹಿಂದ ಮತಗಳು ಬಿಜೆಪಿಗೆ ಬರಲಿವೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಯಿಸಿ, ಬಿಜೆಪಿಯವರಿಗೆ ಅಹಿಂದ ವರ್ಗಗಳ ಮೇಲೆ ಕಾಳಜಿಯಿಲ್ಲ. ಬಿಜೆಪಿಯವರು ಎಂದಿಗೂ ಶ್ರೀಮಂತರ ಪರ. ನಮ್ಮ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಂತೆ ನಡೆದು, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ನಮ್ಮ ಸರ್ಕಾರ ಬಿಜೆಪಿ ಬೆಂಬಲಿಗ ಮತದಾರರನ್ನು ಸೇರಿಸಿ, ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಜನರನ್ನು ಸಬಲೀಕರಣಗೊಳಿಸಲು ಇವುಗಳು ನೆರವಾಗುತ್ತವೆ ಎಂದರು.

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ
ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ಈ ವರ್ಷ 56432 ಹುದ್ದೆಗಳ ನೇಮಕಾತಿ ಮಾಡಲಿದ್ದು, ಹೀಗೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...