ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

Date:

ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.

- Advertisement -

ಅವರು ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದರು.

ನಿನ್ನೆ 11 ಜನ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಕಣದಿಂದ ಹಿಂದೆ ಸರಿದಿರುವುದರಿಂದ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಹೇಳಿದರು.

ಇದನ್ನು ಓದಿದ್ದೀರಾ? ಪೆಟ್ರೋ ಡಾಲರ್ ಎಂದರೇನು? ಅಮೆರಿಕದ ಅರ್ಥವ್ಯವಸ್ಥೆಯ ಬುಡ ಅಲುಗಾಡುತ್ತಿರುವುದೇಕೆ?

ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಸಲ್ಲಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ.‌ ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ ಎಂದರು.

ಪಕ್ಷದ ಕಟ್ಟಾಳು; ನಿಷ್ಠಾವಂತ ಕಾರ್ಯಕರ್ತರು

ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು, . ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ, ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...