‘ಕಾಂಗ್ರೆಸ್ ನಡಿಗೆ ಮತದಾರರ ಕಡೆಗೆ’: SIR ಕುರಿತು ರಾಜ್ಯದ 5 ಕಂದಾಯ ವಿಭಾಗಗಳಲ್ಲಿ ಸಮಾವೇಶ

Date:

ಕೇಂದ್ರ ಚುನಾವಣಾ ಆಯೋಗವು ಆರಂಭಿಸಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ನೈಜ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಲು, ರಾಜ್ಯದ ಐದು ಕಂದಾಯ ವಿಭಾಗಗಳಲ್ಲಿ ಕಾಂಗ್ರೆಸ್ ಪಕ್ಷವು ಬೃಹತ್ ಜಾಗೃತಿ ಸಮಾವೇಶಗಳನ್ನು ಆಯೋಜಿಸಿದೆ.

- Advertisement -

‘ಕಾಂಗ್ರೆಸ್ ನಡಿಗೆ ಮತದಾರರ ಕಡೆಗೆ’ ಎಂಬ ಶೀರ್ಷಿಕೆಯಡಿ ಈ ಎಸ್.ಐ.ಆರ್. (SIR – Voter Roll Monitoring Committee) ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 30ರಿಂದ ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ (ಎಲ್ಲಾ ಸಂಭಾವ್ಯ ಆನುವಂಶಿಕ ಸ್ಥಿತಿಗಳ ಸಂಪೂರ್ಣ ಎಣಿಕೆ) ಪ್ರಕ್ರಿಯೆ ನಡೆಸಲಿದ್ದು, ಈ ಸಂದರ್ಭದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಎಚ್ಚರದಿಂದಿರಬೇಕು ಎಂದು ಕೆಪಿಸಿಸಿ ಎಸ್.ಐ.ಆರ್. ಮತದಾರರ ಪಟ್ಟಿ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ವಿ.ಆರ್. ಸುದರ್ಶನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರಿ, ನೈಜ ಮತದಾರರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಸುವ ಸಾಧ್ಯತೆಯಿದೆ ಎಂದು ಸುತ್ತೋಲೆಯಲ್ಲಿ ಆರೋಪಿಸಲಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವನ್ನು ಎಚ್ಚರಿಸಲು ಈ ಸಮಾವೇಶಗಳನ್ನು ರೂಪಿಸಲಾಗಿದೆ. ಇತ್ತೀಚೆಗಷ್ಟೇ ದೇವನಹಳ್ಳಿಯಲ್ಲಿ ಇದೇ ಮಾದರಿಯ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

ಇದನ್ನು ಓದಿದ್ದೀರಾ? ಫಿಫಾ ಜಗತ್ತಿನಲ್ಲಿ ಭಾರತದ ಹೆಜ್ಜೆಗುರುತು – ಕನ್ನಡಿಗ ಕೆಂಪಯ್ಯನವರ ಮರೆಯಲಾಗದ ಸಾಧನೆ

ಜೂನ್ 23, 2026 (ಮಂಗಳವಾರ) – ಮಂಗಳೂರು ನಗರ, ಜೂನ್ 25, 2026 (ಗುರುವಾರ) – ಹುಬ್ಬಳ್ಳಿ ನಗರ, ಜೂನ್ 27, 2026 (ಶನಿವಾರ) – ಮೈಸೂರು ನಗರ, ಜೂನ್ 29, 2026 (ಸೋಮವಾರ) – ಕಲಬುರಗಿ ನಗರ, ಜೂನ್ 30, 2026 (ಗುರುವಾರ) – ಬೆಂಗಳೂರು ನಗರದ ನಾಲ್ಕು ಕಂದಾಯ ವಿಭಾಗಗಳ ಕೇಂದ್ರಗಳಲ್ಲಿ ಬೆಳಿಗ್ಗೆ 11 ಗಂಟೆಗೆ ಸಮಾವೇಶಗಳು ನಡೆಯಲಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಿಡಬ್ಲ್ಯುಸಿ ಸದಸ್ಯರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸಚಿವರು, ಶಾಸಕರು, ಸಂಸದರು, ಡಿಸಿಸಿ/ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಮತದಾರರ ಹಿತದೃಷ್ಟಿಯಿಂದ ಎಲ್ಲಾ ನಾಯಕರು ಹಾಗೂ ಪದಾಧಿಕಾರಿಗಳು ಈ ಸಮಾವೇಶಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿ.ಆರ್. ಸುದರ್ಶನ್ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...