ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ; ಹೋರಾಟ ಕೈಬಿಡುವಂತೆ ಸಿಎಂ ಮನವಿ

Date:

ತಮ್ಮ ಬೇಡಿಕೆಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಪರವಾಗಿ ಕಳಕಳಿಯ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (X) ಪೋಸ್ಟ್ ಹಂಚಿಕೊಂಡಿರುವ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಮತ್ತು ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್ ತೆರಿಗೆ ಇಳಿಸಿ ವರ್ಷಗಳ ನಂತರ ಉದ್ಯಮಿಗಳಿಗೆ ಪ್ರಶ್ನೆಯೇ;...

​ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಿ ಸರ್ಕಾರಗಳು ನೀಡುವ ತೆರಿಗೆ ವಿನಾಯಿತಿಗಳ ಲಾಭವು ತಳಮಟ್ಟದ ಕಾರ್ಮಿಕರ ವೇತನ ಹೆಚ್ಚಳವಾಗಿ ಪರಿವರ್ತನೆಯಾಗದಿರುವುದು ಆರ್ಥಿಕ ನೀತಿ ನಿರೂಪಕರ ಮುಂದಿರುವ ದೊಡ್ಡ ಸವಾಲಾಗಿದೆ. ಫಿಕ್ಕಿ ವೇದಿಕೆಯಲ್ಲಿ ಪ್ರಧಾನಿಯವರು ಎತ್ತಿರುವ ಪ್ರಶ್ನೆಗಳು...

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು:...

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ ಕುಸಿದರೆ ಅರಣ್ಯದ ಜೀವನಾಡಿಗಳೇ ದುರ್ಬಲವಾಗುತ್ತವೆ. ಇದರ ಪರಿಣಾಮ ಮನುಷ್ಯರಿಗಷ್ಟೇ ಸೀಮಿತವಾಗುವುದಿಲ್ಲ. ಕಾಡಿನಲ್ಲಿರುವ ಆನೆ, ಹುಲಿ, ಚಿರತೆ, ಕಾಡೆಮ್ಮೆ, ಜಿಂಕೆ ಸೇರಿದಂತೆ...

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟದ ನೋವು ಮತ್ತು ಸಂಕಷ್ಟ ತಮಗೆ ಅರ್ಥವಾಗುತ್ತದೆ ಎಂದಿರುವ ಅವರು, ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ಮಾಡುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. “ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ” ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆಯ ಅವಕಾಶ ಕಲ್ಪಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಅವರು ಇದೇ ವೇಳೆ ಉಲ್ಲೇಖಿಸಿದ್ದಾರೆ.

ಸಂಪುಟದೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಆಶಾ ಕಾರ್ಯಕರ್ತೆಯರೊಂದಿಗೆ ಇರುವುದಾಗಿ ಭರವಸೆ ನೀಡಿರುವ ಡಿ.ಕೆ. ಶಿವಕುಮಾರ್, “ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ” ಎಂದು ಕೋರಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ, ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ತಿಳಿಸಿರುವ ಅವರು, ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ...

RSS ಸಂಸ್ಥೆಗಳು ಆಯೋಜಿಸಿದ್ದ ಪರೀಕ್ಷೆಗೆ ಕೇರಳ ಹೈಕೋರ್ಟ್ ಸಮ್ಮತಿ; ಆದರೆ, ಫಲಿತಾಂಶ ಪ್ರಕಟಣೆಗೆ ತಡೆ

ಆರ್‌ಎಸ್‌ಎಸ್‌ ಸಂಯೋಜಿತ ಸಂಸ್ಥೆಗಳು ಆಯೋಜಿಸಿರುವ ಶಾಲಾ ಮಟ್ಟದ ವಿದ್ಯಾರ್ಥಿವೇತನ ಮಾದರಿಯ ಪರೀಕ್ಷೆಯು...

FICCI ಸಮಾವೇಶದ ಕಿಚ್ಚು: ತೆರಿಗೆ ರಿಯಾಯಿತಿ, ಉದ್ಯೋಗ ಸೃಷ್ಟಿ ಕುರಿತು ಮೋದಿ–ರಾಹುಲ್ ವಾಕ್ಸಮರ!

ಕಾರ್ಪೊರೇಟ್ ತೆರಿಗೆ ಕಡಿತದ ಲಾಭವನ್ನು ಉದ್ಯೋಗಿಗಳಿಗೆ ವರ್ಗಾಯಿಸದ ಉದ್ಯಮಗಳ ವಿರುದ್ಧ ಪ್ರಧಾನಿ...

ಬಸವಣ್ಣ ಅವಹೇಳನ: ಪರಾರಿಯಾಗಲು ಯತ್ನ; ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಬಂಧನ

12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಕುರಿತು ತಮ್ಮ...