ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ: ಸಿಎಂ ಸಿದ್ದರಾಮಯ್ಯ

Date:

Advertisements

ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚಿಸಲಾಯಿತು.

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ  ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಸಿಎಂ ಸೂಚಿಸಿದರು.

ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ. ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ ಎಂದು ಅಧಿಕಾರಿಗಳು ಗಮನಕ್ಕೆ ತಂದರು.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ.

ಸಚಿವರಾದ ಎಚ್ ಕೆ ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X