ಶೀಘ್ರದಲ್ಲೇ ನಂದಿನಿ ಹಾಲು, ಬಸ್ ಪ್ರಯಾಣ ದರ ಹೆಚ್ಚಳ

Date:

ರಾಜ್ಯದ ಜನತೆಗೆ ಶೀಘ್ರದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಒಂದೆಡೆ ರೈತರ ಹಿತದೃಷ್ಟಿಯಿಂದ ‘ನಂದಿನಿ’ ಹಾಲಿನ ದರ ಏರಿಕೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಇನ್ನೊಂದೆಡೆ ಸಾರಿಗೆ ನಿಗಮಗಳ ನಷ್ಟವನ್ನು ಸರಿದೂಗಿಸಲು ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಹೈನುಗಾರಿಕೆ ವೆಚ್ಚ ಏರಿಕೆ ಹಾಗೂ ಸಾರಿಗೆ ಇಲಾಖೆಯ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈ ಎರಡೂ ದರಗಳ ಪರಿಷ್ಕರಣೆ ಸರ್ಕಾರಕ್ಕೆ ಅನಿವಾರ್ಯವಾಗಿದೆ.

- Advertisement -

​ಲೀಟರ್‌ ಹಾಲಿಗೆ ₹4 ರಿಂದ ₹5 ಹೆಚ್ಚಳ ಸಾಧ್ಯತೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ, ನಂದಿನಿ ಹಾಲಿನ ಖರೀದಿ ಹಾಗೂ ಮಾರಾಟ ದರವನ್ನು ಪ್ರತಿ ಲೀಟರ್‌ಗೆ ಕನಿಷ್ಠ ₹4 ರಿಂದ ₹5 ರಷ್ಟು ಹೆಚ್ಚಿಸುವ ನಿರೀಕ್ಷೆ ಇದೆ. ದರ ಪರಿಷ್ಕರಣೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಅಧಿಕಾರಿಗಳು ತುರ್ತಾಗಿ ಸಮಗ್ರ ವರದಿಯೊಂದನ್ನು ಸಿದ್ಧಪಡಿಸಿದ್ದು, ಶುಕ್ರವಾರ ಅಥವಾ ಶನಿವಾರದಂದು ಸರ್ಕಾರಕ್ಕೆ ಸಲ್ಲಿಕೆಯಾಗುವ ಸಾಧ್ಯತೆಯಿದೆ.

​ಮಂಗಳವಾರವಷ್ಟೇ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದ ರಾಜ್ಯ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗವು, ದರವನ್ನು ಲೀಟರ್‌ಗೆ ₹8 ರಿಂದ ₹10 ರಷ್ಟು ಹೆಚ್ಚಿಸುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಸಿಎಂ, ಕಳೆದ 10 ವರ್ಷಗಳ ಪಶು ಆಹಾರದ ಬೆಲೆ, ಉತ್ಪಾದನಾ ವೆಚ್ಚ, ಖರೀದಿ-ಮಾರಾಟದ ವಿವರ ಹಾಗೂ ನೆರೆ ರಾಜ್ಯಗಳ ದರ ಪಟ್ಟಿಯನ್ನೊಳಗೊಂಡ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಹಾಲಿನ ಮಾರಾಟ ವೆಚ್ಚವೂ ಏರಿಕೆಯಾಗಿರುವ ಕಾರಣ, ಹೈನುಗಾರಿಕೆಯನ್ನೇ ನಂಬಿರುವ ರೈತರ ಬೆಂಬಲಕ್ಕೆ ನಿಲ್ಲಲು ಸರ್ಕಾರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.

​ಕಳೆದ ವರ್ಷದ ಏಪ್ರಿಲ್‌ನಲ್ಲಿ ಹಾಲಿನ ದರವನ್ನು ಲೀಟರ್‌ಗೆ ₹4 ರಷ್ಟು ಹೆಚ್ಚಿಸಲಾಗಿತ್ತು. ಪ್ರಸ್ತುತ ನಂದಿನಿ ಹಾಲಿನ ಮಾರುಕಟ್ಟೆ ದರ ಲೀಟರ್‌ಗೆ ₹46 ಇದೆ. ಒಕ್ಕೂಟಗಳು ರೈತರಿಂದ ₹35 ಕ್ಕೆ ಖರೀದಿಸುತ್ತಿದ್ದು, ಸರ್ಕಾರವು ಹಾಲಿನ ಕೊಬ್ಬಿನಾಂಶದ ಆಧಾರದ ಮೇಲೆ ₹5 ಪ್ರೋತ್ಸಾಹಧನ ನೀಡುತ್ತಿದೆ.

​ವಿಧಾನಪರಿಷತ್‌ನಲ್ಲಿ ಹಾಲಿನ ದರ ಚರ್ಚೆ:

ವಿಧಾನಪರಿಷತ್‌ನಲ್ಲಿ ಬರ ಪರಿಸ್ಥಿತಿ ಮೇಲಿನ ಚರ್ಚೆ ವೇಳೆ ಮಾತನಾಡಿದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್. ರವಿ, “ಬರಗಾಲದಿಂದಾಗಿ ಮೇವಿನ ಕೊರತೆ ಹಾಗೂ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ರೈತರ ನೆರವಿಗೆ ಧಾವಿಸಲು ಹಾಲಿನ ದರವನ್ನು ಕನಿಷ್ಠ ₹12 ಹೆಚ್ಚಿಸಿ, ಆ ಹಣವನ್ನು ನೇರವಾಗಿ ಉತ್ಪಾದಕರಿಗೆ ವರ್ಗಾಯಿಸಬೇಕು. ಈ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡಬಾರದು” ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ನಾವೂ ರೈತರ ಪರವೇ ಇದ್ದೇವೆ, ಸರ್ಕಾರ ದರ ಹೆಚ್ಚಳಕ್ಕೆ ತಕ್ಷಣ ಅನುಮತಿ ನೀಡಲಿ” ಎಂದು ಒತ್ತಾಯಿಸಿದರು.

​ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್‌ನಲ್ಲಿ ಹಾಲಿನ ದರ ಏರಿಕೆ ಚರ್ಚೆಯ ನಡುವೆಯೇ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಬಸ್ ಪ್ರಯಾಣ ದರ ಪರಿಷ್ಕರಣೆಯ ಸುಳಿವು ನೀಡಿದ್ದಾರೆ. ಸಾರಿಗೆ ಇಲಾಖೆಯ ಆರ್ಥಿಕ ಸ್ಥಿತಿಗತಿಯನ್ನು ಬಿಚ್ಚಿಟ್ಟ ಅವರು, “ಇತ್ತೀಚಿನ ದಿನಗಳಲ್ಲಿ ಡೀಸೆಲ್ ದರ ನಾಲ್ಕು ಬಾರಿ ಏರಿಕೆಯಾಗಿದೆ. ಈ ಹಿಂದೆ ಪ್ರತಿಪಕ್ಷಗಳ ವಿರೋಧದ ಕಾರಣಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲ. ಆದರೆ, ಪ್ರಸ್ತುತ ಪರಿಸ್ಥಿತಿಯಲ್ಲಿ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ” ಎಂದು ಸ್ಪಷ್ಟಪಡಿಸಿದರು.

​ಸಾರಿಗೆ ನಿಗಮಗಳು ಸದ್ಯ ಬರೋಬ್ಬರಿ ₹78,000 ಕೋಟಿಗಳಷ್ಟು ನಷ್ಟದಲ್ಲಿವೆ. ಆರ್ಥಿಕ ಹೊರೆಯಿಂದಾಗಿ ಸಿಬ್ಬಂದಿಗೆ ಪ್ರತಿ ತಿಂಗಳು ವೇತನ ಪಾವತಿಸುವುದೇ ಕಷ್ಟಕರವಾಗಿದೆ. ಜೊತೆಗೆ, ಈ ಅಗಾಧ ಪ್ರಮಾಣದ ನಷ್ಟವು ಇಲಾಖೆಯ ಹೊಸ ನೇಮಕಾತಿ ಪ್ರಕ್ರಿಯೆಗಳಿಗೂ ದೊಡ್ಡ ತೊಡಕಾಗಿ ಪರಿಣಮಿಸಿದೆ ಎಂದು ಸಚಿವರು ಸದನಕ್ಕೆ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ನಾಯಕರ ಅವಹೇಳನ, ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್‌ ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್‌ ನಕಾರ

ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು...

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...