ನೆಲ-ಜಲ-ಭಾಷೆ ವಿಚಾರದಲ್ಲಿ ಕೇಂದ್ರದಿಂದ ನಿರಂತರ ಅನ್ಯಾಯ, ಮಹದಾಯಿ ಹೋರಾಟಕ್ಕೆ ಸಿದ್ಧ: ಸಿಎಂ

Date:

ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

- Advertisement -

“ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ನನಗೆ ತಿಳಿಸಿದ್ದಾರೆ ಎಂದು ಸಾವಂತ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಷಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ. ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ದ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ” ಎಂದಿದ್ದಾರೆ.

“ತೆರಿಗೆ ಹಂಚಿಕೆ, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಅನುದಾನ ಕಡಿತವೂ ಸೇರಿದಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...