ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ
ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ವಿಷಯದ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಎಲ್ಲ ಸದಸ್ಯರು ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಸದಸ್ಯರು ಕೂಡಾ ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ‘ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್’ ಎಂದು ಘೋಷಣೆ ಕೂಗಿದರು.
ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.
ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ
“ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ ಸಭಾಪತಿ ಯವರಿಗೆ ದೂರು ನೀಡಿದ್ದಾರೆ. ಪೊಲೀಸ್ ಠಾಣೆಗೂ ದೂರು ನೀಡಲು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಥೂ ಇವರ ಜನ್ಮಕ್ಕಿಷ್ಟು,, ಶಿಸ್ತು ಸಂಸ್ಕಾರ ಸಂಪ್ರದಾಯ ಸಂಸ್ಕೃತಿ ಏನೆಲ್ಲಾ ಪುಂಗಿ ಊದುವ ದುಷ್ಕರ್ಮಿಗಳು,,ದೇಶದ ಪ್ರತಿಯೊಂದು ವ್ಯವಸ್ಥೆಯನ್ನು ಕುಲಗೆಡಿಸಿ ಶಾಂತಿ ಸೌಹಾರ್ದತೆಯನ್ನು ಹಾಳುಮಾಡಿದ ದೇಶದ್ರೋಹಿಗಳು,, ಸದನದಲ್ಲಿ ಅಂಥಾ ಭಾಷೆ ಬಳಸುವ ಮುಂಚೆ ತಮ್ಮ ಮನೆಯಲ್ಲೂ ಮಹಿಳೆಯರಿದ್ದಾರೆ ಅನ್ನುವ ಕನಿಷ್ಠ ಪ್ರಜ್ಞೆ ಇಲ್ಲದ ಅನಾಗರಿಕ,, ಇಂಥವರಿಗೆ ತರಬೇತಿ ನೀಡಿದ ಮಹಾನ್ ದೇಶಭಕ್ತ ಸಂಸ್ಥೆಗೆ ತನ್ನ ಮರ್ಯಾದೆ ಹರಾಜು ಮಾಡುವರು ಎನ್ನುವ ಗಂಭೀರತೆ ಬದ್ಧತೆ ಇರುವುದಾದರೆ,,, ತಕ್ಷಣ ಪಕ್ಷದಿಂದ ಹೊರದಬ್ಬಲಿ