ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ: ಸಿ ಟಿ ರವಿ ಬಂಧನ

Date:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ವಿಷಯದ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಎಲ್ಲ ಸದಸ್ಯರು ಅಂಬೇಡ್ಕ‌ರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಸದಸ್ಯರು ಕೂಡಾ ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ‘ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್’ ಎಂದು ಘೋಷಣೆ ಕೂಗಿದರು.

ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

“ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ ಸಭಾಪತಿ ಯವರಿಗೆ ದೂರು ನೀಡಿದ್ದಾರೆ. ಪೊಲೀಸ್‌ ಠಾಣೆಗೂ ದೂರು ನೀಡಲು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...