ಎಡಪಂಥೀಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ನಿಶ್ಚಲಾನಂದ ಸ್ವಾಮಿ

Date:

ಇತ್ತೀಚೆಗೆ ಎಡಪಂಥೀಯರಲ್ಲ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ (ಮಾಜಿ ಎಡಿಸಿ ಎಚ್‌.ಎಲ್‌ ನಾಗರಾಜ್) ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಿಶ್ಚಲಾನಂದನಾಥ ಅವರು ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

- Advertisement -

ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿಶ್ಚಲಾನಂದನಾಥ ಅವರು, “ಎಡಪಂಥೀಯರು ಅತ್ಯಂತ ಅಪಾಯಕಾರಿ (ಮೋಸ್ಟ್ ಡೇಂಜರಸ್)” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಎಡಪಂಥೀಯರು ಸರ್ಕಾರದ ವಿರುದ್ಧ ಮಾತನಾಡುತ್ತಾರೆ, ಸ್ವಾರ್ಥಿಗಳು ಮತ್ತು ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಹಾಸನ | ನಿಶ್ಚಲಾನಂದ ಸ್ವಾಮಿ ಹೇಳಿಕೆಗೆ  ಸಿಪಿಐಎಂ ಖಂಡನೆ 

ಈ ಹೇಳಿಕೆ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗಿದೆ. ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಎಡಪಂಥೀಯರು ಯಾವಾಗಲೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಮತ್ತು ಜನರ ಹಕ್ಕುಗಳಿಗಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಾರೆ ಎಂದು ಸಿಪಿಐಎಂ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಆಧಾರಗಳಿಲ್ಲದೆ ಕಾಲೇಜು ವಿದ್ಯಾರ್ಥಿನಿಯರ ಮುಂದೆ ಇಂತಹ ಬೇಜವಾಬ್ದಾರಿ ಮತ್ತು ಅವಹೇಳನಕಾರಿ ಮಾತುಗಳನ್ನಾಡಿರುವ ಸ್ವಾಮೀಜಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಬೆನ್ನಲ್ಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಿಶ್ಚಲಾನಂದನಾಥ ಸ್ವಾಮೀಜಿ, “ಹಾಸನ ಜಿಲ್ಲೆಯ ಕಾರ್ಯಕ್ರಮದಲ್ಲಿ ಮಾತನಾಡುವ ಸಂದರ್ಭದಲ್ಲಿ ದೇಶದ ಪರಿಸ್ಥಿತಿಯನ್ನು ಅವಹೇಳನಕಾರಿಯಾಗಿ ಹೊರಗಡೆ ಹೋಗಿ ಮಾತನಾಡುವುದನ್ನು ಸಹಿಸಲಾಗದೆ, ಭಾವನಾತ್ಮಕವಾಗಿ ಮಾತನಾಡಿದೆ. ದೇಶದಲ್ಲಿ ಕಷ್ಟ-ಸುಖಗಳು ಇದ್ದರೂ ದೇಶವನ್ನು ಮಾತೃಭೂಮಿಯಾಗಿ ಪ್ರೀತಿಸಬೇಕು ಎಂದು ಯುವಕರಿಗೆ ಕರೆ ನೀಡುವ ಸಂದರ್ಭದಲ್ಲಿ ಎಡಪಂಥೀಯ ಎಂಬ ಪದವನ್ನು ಬಳಕೆ ಮಾಡಿದ್ದೇನೆ” ಎಂದಿದ್ದಾರೆ.

“ನಮ್ಮ ಆತ್ಮೀಯರು, ಹಾಸನ ಜಿಲ್ಲೆಯ ಯುವಕರು ಸ್ವಾಮೀಜಿ ನೀವು ಈ ರೀತಿ ಮಾತನಾಡಿರುವುದು ನಮಗೆ ನೋವಾಗಿದೆ ಎಂದು ಹೇಳಿದ್ದಾರೆ. ನಾನು ಆ ಮಾತುಗಳನ್ನು ಆಡುವಾಗ ಯಾವುದೇ ದುರುದ್ದೇಶ ಹೊಂದಿರಲಿಲ್ಲ. ಯಾವುದೇ ಸಂಘಟನೆಗಳು, ಚಳವಳಿಗಳು, ಹೋರಾಟಗಾರರ ಬಗ್ಗೆ ನನ್ನ ಮನಸ್ಸಿನಲ್ಲಿ ಯಾವತ್ತೂ ತಪ್ಪು ಭಾವನೆಗಳಿಲ್ಲ. ಅವರ (ಎಡಪಂಥೀಯರ) ಮನಸ್ಸಿಗೆ ನೋವಾಗಿದ್ದರೆ ಆ ಪದವನ್ನು ವಾಪಸ್ ತೆಗೆದುಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

“ಆಕಸ್ಮಿಕವಾಗಿ ಆ ಪದವನ್ನು ಬಳಸಿದ್ದೇನೆ. ಆ ಪದದ ಬಳಕೆಯಿಂದ ಯಾರಿಗೆಲ್ಲ ನೋವಾಗಿದೆಯೋ ಅವರಿಗೆ ನಾನು ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಯಾರೂ ತಪ್ಪು ತಿಳಿಯಬೇಡಿ. ನಿಮ್ಮ ಚಳವಳಿ, ಹೋರಾಟ ಎಂದಿಗೂ ಸಮಾಜಮುಖಿಯಾಗಿರುತ್ತದೆ ನಾವು ಗಮನಿಸಿರುವ ಅಂಶ. ಹಾಗಾಗಿ ಮತ್ತೊಮ್ಮೆ ಆ ಪದ ಬಳಕೆ ಆಕಸ್ಮಿಕವಾಗಿದ್ದು ಎಂದು ಹೇಳುತ್ತೇನೆ. ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...