ಕೊರೋನಾ | ಐಎಲ್‌ಐ ಮತ್ತು ಸಾರಿ ಇರೋರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ದಿನೇಶ್ ಗುಂಡೂರಾವ್

Date:

ಐಎಲ್‌ಐ ಮತ್ತು ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

“ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್‌ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್‌ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ” ಎಂದರು.

“ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ ಕೋವಿಡ್ ಟೆಸ್ಟ್ ನಡೆಸುವಂತೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

“ರೋಗ ಲಕ್ಷಣಗಳು ಇರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಮಾಡಲಾಗುತ್ತಿದೆ. ಮನೆಯಲ್ಲಿ ಐಸೊಲೇಷನ್ ಆಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಹೇಳಲಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಕೋವಿಡ್ ಇಳಿಕೆಯ ಟ್ರೆಂಡ್ ಶುರುವಾಗಬಹುದು ಎಂದು ನಿರೀಕ್ಷಿಸಲಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನ ಅಳವಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನಾಳೆ ಕೊರೋನಾ ಹೆಲ್ಪ್ ಲೈನ್ ಲೋಕಾರ್ಪಣೆ ಮಾಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...