ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

Date:

Advertisements

ಬೆಂಗಳೂರು- ಸಾಂಸ್ಕೃತಿಕ ಲೋಕವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಕಾರ್ಪೊರೇಟ್ ಲೋಕ ಯತ್ನಿಸುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಹಿರಿಯ ಪತ್ರಕರ್ತ, ಸಾಹಿತಿ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ಕಲಾಗ್ರಾಮದಲ್ಲಿ ಹಮ್ಮಿಕೊಂಡಿದ್ದ ತಿಂಗಳ ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿ ಗೌರವವನ್ನು ಸ್ವೀಕರಿಸಿ ಮಾತನಾಡಿದರು.

ನಾಲ್ಕು ಗೋಡೆಗಳ ಮಧ್ಯೆ ಇದ್ದ ರಂಗಭೂಮಿಯನ್ನು ಅಲ್ಲಿಂದ ಬಿಡುಗಡೆ ಮಾಡಿ ಜನರ ಬಳಿಗೆ ಕೊಂಡೊಯ್ಯಲು ದೊಡ್ಡ ಚಳವಳಿ ನಡೆಯಿತು. ಜನರ ಸಮಸ್ಯೆಗಳನ್ನು ಬಿಂಬಿಸುವ ಕೆಲಸ ನಡೆಯಿತು. ಆದರೆ ಈಗ ಕಾರ್ಪೊರೇಟ್ ಜಗತ್ತು ಜನರ ಬಳಿಯಿಂದ ಕಿತ್ತು ಮತ್ತೆ ಅದನ್ನು ನಾಲ್ಕು ಗೋಡೆಯ ಮಧ್ಯೆ ಬಂಧಿಸಲು ಯತ್ನಿಸುತ್ತಿದೆ ಎಂದರು.

Advertisements

ರಂಗಭೂಮಿ ಜನರ ಒಡನಾಡಿ. ಅದು ಪ್ರಶ್ನಿಸಲು ಪ್ರೇರೇಪಿಸುತ್ತದೆ. ಸಮಾಜ ಬದಲಾವಣೆಗೆ ದಾರಿಮಾಡಿಕೊಡುತ್ತದೆ. ಆದ ಕಾರಣಕ್ಕಾಗಿಯೇ ರಂಗಭೂಮಿಯ ಮನಸ್ಥಿತಿಯನ್ನು ಬದಲಿಸುವ ತುರ್ತು ಪ್ರಭುತ್ವಕ್ಕೆ ಇದೆ. ಸಾಹಿತ್ಯ ಹಾಗೂ ರಂಗಭೂಮಿಯ ಮೇಲೆ ಭಯದ ಪರದೆಯನ್ನು ಸೃಷ್ಟಿಸಿ ಅವು ಸ್ವಯಂ ಸೆನ್ಸಾರ್ ಶಿಪ್ ಹೇರಿಕೊಳ್ಳುವಂತೆ ಪ್ರಭುತ್ವ ಒತ್ತಾಯಿಸುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ. ಇದರ ವಿರುದ್ಧ ರಂಗ ಲೋಕ ಎಚ್ಚೆತ್ತುಕೊಳ್ಳಬೇಕು ಎಂದರು.

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ ಕೆ ವಿ ನಾಗರಾಜಮೂರ್ತಿ ಅವರು ಮಾತನಾಡಿ, ನಾಟಕ ಅಕಾಡೆಮಿ ಬೆಂಗಳೂರಿನ ಹೊರಗಿನ ತಂಡಗಳನ್ನು ಆಹ್ವಾನಿಸಿ ನಾಟಕ ಪ್ರದರ್ಶನಕ್ಕೆ ದಾರಿ ಮಾಡಿಕೊಟ್ಟಿದೆ. ಈ ಮೂಲಕ ನಗರ ಹಾಗೂ ಗ್ರಾಮೀಣ ತಂಡಗಳ ನಡುವೆ ಸಂವಾದ ಸಾಧ್ಯವಾಗಿದೆ. ಇದು ಆಶಾದಾಯಕ ಬೆಳವಣಿಗೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸಂತೋಷ ನಾಯಕ ಪಟ್ಲ ಅವರು ನಿರ್ದೇಶಿಸಿದ ‘ದಿ ಫೈಯರ್’ ನಾಟಕವನ್ನು ಪ್ರದರ್ಶಿಸಲಾಯಿತು. ಉಡುಪಿಯ ಭೂಮಿಗೀತ ಸಾಂಸ್ಕೃತಿಕ ವೇದಿಕೆ ನಾಟಕವನ್ನು ಪ್ರದರ್ಶಿಸಿತು. ನಾಟಕ ಅಕಾಡೆಮಿ ಸದಸ್ಯರಾದ ಜಗದೀಶ್ ಜಾಲ ಹಾಗೂ ಲವಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X