ಹಬ್ಬದ ಬಳಿಕ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿಕೆ ಶಿವಕುಮಾರ್

Date:

  • ಸಿಎಂ ಸಿದ್ದರಾಮಯ್ಯ ಜೊತೆ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ 
  • ‘ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ’

ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ ದಸರಾ ಹಬ್ಬದ ಬಳಿಕ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಮೊದಲು ಮಾತನಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

- Advertisement -

ಬೆಂಗಳುರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸಿಎಂ, ನಾನು ಚರ್ಚೆ ನಡೆಸಿದ ಬಳಿಕ ದೆಹಲಿಯವರು ಆಗಮಿಸುತ್ತಾರೆ. ರಾಜ್ಯ ಕಾಂಗ್ರೆಸ್ ಘಟಕದ ಉಸ್ತುವಾರಿ ಸುರ್ಜೇವಾಲ ಸದ್ಯ ಬ್ಯುಸಿ‌ ಇದ್ದಾರೆ. ಅವರು ಬಂದ ಮೇಲೆ‌ ಫೈನಲ್ ಮಾಡುತ್ತೇವೆ. ಶಾಸಕರು, ಕಾರ್ಯಕರ್ತರಿಗೆ ಆದಷ್ಟು ಬೇಗ ಅಧಿಕಾರ ಕೊಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುಮಾರಸ್ವಾಮಿಗೆ ತಿರುಗೇಟು

“ಬರಗಾಲದಲ್ಲಿ ವಿದ್ಯುತ್ ಅಭಾವವನ್ನ ಸೃಷ್ಟಿ ಮಾಡಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಯಾರು ಅಂತಹ ಜ್ಞಾನ ಭಂಡಾರದಿಂದ, ಅನುಭವದ ಮಾತುಗಳನ್ನು ಆಡಿಸಿದರೊ ಗೊತ್ತಿಲ್ಲ. ನಮಗೆ ಚಿಂತೆಯಿಲ್ಲ ನಮ್ಮಜನರನ್ನು ಕಾಪಾಡುತ್ತೇವೆ, ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಉತ್ಪಾದನೆ ನಿಲ್ಲಬಾರದು ಎಂದು ಸೂಚನೆ ನೀಡಿದ್ದು ಮಾತು ಕೊಟ್ಟಂತೆ ವಿದ್ಯುತ್ ನೀಡುತ್ತಿದ್ದೇವೆ” ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಐದು ತಿಂಗಳಾದರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ. ಚುನಾವಣೆ ವೇಳೆ ಬಿಜೆಪಿಯಲ್ಲಿ ಟಿಕೆಟ್ ವ್ಯಾಪಾರ ನಡೆದಿದೆ. ಈಗಾಗಲೇ ಒಂದು ದೂರು ದಾಖಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...