ಪಕ್ಷದ ಶಾಸಕರಿಂದಲೇ ಭ್ರಷ್ಟಾಚಾರ ಆರೋಪ, ಸಚಿವ ಜಮೀರ್ ರಾಜೀನಾಮೆ ನೀಡಲಿ: ಆರ್‌ ಅಶೋಕ್

Date:

ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯ ನವರೇ, ಈ ಕೂಡಲೇ ಸಚಿವ ಜಮೀರ್ ಅಹಮದ್‌ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆಗ್ರಹಿಸಿದ್ದಾರೆ.

- Advertisement -

“ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ” ಎಂಬ ವರದಿಯೊಂದನ್ನು ಅಶೋಕ್‌ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್‌ ಅಹಮದ್‌ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ” ಎಂದಿದ್ದಾರೆ.

“ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....