ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್; ಪೋಸ್ಟರ್‌ ಬಿಡುಗಡೆ ಮಾಡಿದ ಬಿಜೆಪಿ

Date:

  • ಕಾಂಗ್ರೆಸ್‌ ಸರ್ಕಾರ ಕಲೆಕ್ಷನ್‌ ಸರ್ಕಾರ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ: ಸದಾನಂದಗೌಡ
  • ಕಲೆಕ್ಷನ್‌ ಕೇಂದ್ರ ಬಿಂದು ರಾಹುಲ್‌ ಗಾಂಧಿಯಾಗಿದ್ದು, ಸಿಎಂ, ಡಿಸಿಎಂ ಮೂಲಕ ಹಣ ಸಂದಾಯ

ಭ್ರಷ್ಟಾಚಾರ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದ್ದು, “ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್” ಎಂಬ ಪೋಸ್ಟರ್ ಮೂಲಕ ವಾಗ್ದಾಳಿ ನಡೆಸಿದೆ.

- Advertisement -

ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ಬಿಡುಗಡೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಬಳಿಕ ಮಾತನಾಡಿದ ಡಿವಿ ಸದಾನಂದಗೌಡ, “ಬ್ರ್ಯಾಂಡ್‌ ಬೆಂಗಳೂರು ಹೆಸರರಲ್ಲಿ ಬ್ರ್ಯಾಂಡ್‌ ಸಿಎಂ, ಡಿಸಿಎಂ ಸಿದ್ದರಾಗುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಕಲೆಕ್ಷನ್‌ ಸರ್ಕಾರ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ರಾಜ್ಯದ ಜನರಿಗೆ ನಾವು ಪೂರ್ಣ ವಿವರ ಕೊಡಲು ಈ ಪೋಸ್ಟರ್‌ ಬಿಡುಗಡೆ ಮಾಡುತ್ತೇವೆ” ಎಂದರು.

”ಕಲೆಕ್ಷನ್‌ ಕೇಂದ್ರ ಬಿಂದು ರಾಹುಲ್‌ ಗಾಂಧಿಯಾಗಿದ್ದು, ಪಂಚರಾಜ್ಯಗಳ ಚುನಾವಣೆಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಮೂಲಕ ಹಣ ಸಂದಾಯವಾಗುತ್ತಿದೆ. ಕಲೆಕ್ಷನ್‌ಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸ್ಪರ್ಧೆಗೆ ಇಳಿದಿದ್ದಾರೆ.‌ ಇದರ ವಂಶವೃಕ್ಷ ಈ ಪೋಸ್ಟರ್‌ನಲ್ಲಿದೆ” ಎಂದು ವಿವರಿಸಿದರು.

“ಸಿಎಂ ಸಿದ್ದರಾಮಯ್ಯ ಅವರಿಂದ ರಣದೀಪ್‌ ಸಿಂಗ್ ಸುರ್ಜೇವಾಲಾ ಮೂಲಕ‌ ಮತ್ತು ಡಿಕೆ ಶಿವಕುಮಾರ್‌ ಅವರಿಂದ ಕೆಸಿ ವೇಣುಗೋಪಾಲ ಮೂಲಕ ರಾಹುಲ್‌ ಗಾಂಧಿಗೆ ಹಣ ಸಂದಾಯವಾಗುತ್ತಿದೆ. ಸಿದ್ದರಾಮಯ್ಯ ಇದರ ಉಸ್ತುವಾರಿಗಾಗಿ ಭೈರತಿ ಸುರೇಶ್ ಮತ್ತು ಮಗ ಯತೀಂದ್ರ ಮೂಲಕ ಹಣ ಡೀಲ್‌ ಮಾಡುತ್ತಿದ್ದಾರೆ” ಎಂದು ಸದಾನಂದಗೌಡ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿ ನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ

“ಗುತ್ತಿಗೆದಾರರ ಸಂಘದಲ್ಲಿ ಎರಡು ಗುಂಪುಗಳು ಇವೆ. ಒಂದು ಕೆಂಪಣ್ಣ ಮತ್ತು ರಾಮಯ್ಯ ಅವರು ಸಿದ್ದರಾಮಯ್ಯ ಪರವಾದ ಗುಂಪು. ಇನ್ನೊಂದು ಕಡೆ ತಂಡ ದೊಡ್ಡದಿದೆ. ಉಪಾಧ್ಯಕ್ಷರ ನೇತೃತ್ವದಲ್ಲಿ ಈ ತಂಡ ಕೆಲಸ ಮಾಡುತ್ತಿದೆ. ಆ ತಂಡದ ಸದಸ್ಯ ಅಂಬಿಕಾಪತಿ ಮನೆಯ ಮೇಲೆ ಐಟಿ ದಾಳಿ ಮಾಡಿದ್ದು ರಾಜ್ಯ ಗಮನಿಸಿದೆ” ಎಂದರು.

ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಹೈಕೋರ್ಟ್‌ ಕೂಡ ಡಿಕೆ ಶಿವಕುಮಾರ್‌ ಮೇಲೆ ತನಿಖೆ ನಡೆಸಲು ಒಪ್ಪಿಗೆ ನೀಡಿದೆ. ಕೇವಲ ಐಟಿ ತನಿಖೆಯಿಂದ ತನಿಖೆ ಬೇಡ. ಇದರ ಬೇರು ಹುಡುಕಬೇಕು. ಹೀಗಾಗಿ ಸಿಬಿಐ ತನಿಖೆ ಮಾತ್ರ ಸಾಧ್ಯ. ಡಿಕೆ ಶಿವಕುಮಾರ್‌ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಿ, ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಈ ಸರ್ಕಾರಕ್ಕೆ ಹೊಸ ಕೆಲಸ ಮಾಡಲು ಉತ್ಸಾಹ ಇಲ್ಲ. ಈವರೆಗೂ ಯಾವುದೇ ಟೆಂಡರ್‌ ಕರೆದಿಲ್ಲ. ಯಾವಾಗ ಕರೆಯುತ್ತಾರೋ ಅದು ಗೊತ್ತಿಲ್ಲ. ಒಳ್ಳೆಯ ಗುತ್ತಿಗೆದಾರರಿಗೆ ರಾಜ್ಯದಲ್ಲಿ ಅವಕಾಶವಿಲ್ಲ. ನಮ್ಮ ಆಗ್ರಹ ಇಷ್ಟೇ, ಕಮಿಷನ್‌ ಸರ್ಕಾರ ತೊಲಗಬೇಕು. ಈ ಬಗ್ಗೆ ರಾಜ್ಯದ ಸಾಮಾನ್ಯ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು.

”ಬೆಳಗಾವಿಗೆ ಡಿಸಿಎಂ ಯಾಕೆ ಹೋಗಿದ್ದರು ಗೊತ್ತಾ? ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸತೀಶ್‌ ಜಾರಕಿಹೊಳಿ ಕಲೆಕ್ಷನ್‌ ಜಾಸ್ತಿ ಮಾಡುತ್ತಿದ್ದಾರೆ. ಇದು ಕೈತಪ್ಪಿ ಹೋಗುತ್ತಿದೆ ಎಂಬ ಭಯಬಿದ್ದು ಡಿಕೆ ಶಿವಕುಮಾರ್‌ ಬೆಳಗಾವಿಗೆ  ಹೋಗಿದ್ದಾರೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು...

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

“ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು...

ಸಂಸತ್ತಿಗೆ ಬನ್ನಿ, ವಿಶೇಷ ಅಧಿವೇಶನಕ್ಕೆ ಸಿದ್ಧ: ರಾಹುಲ್ ಬಹಿರಂಗ ಸವಾಲು ಸ್ವೀಕರಿಸಿದ ಅಮಿತ್ ಶಾ

ಕೇಂದ್ರ ಸರ್ಕಾರದ ವಿರುದ್ಧವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಮತ ಕಳವು ಸಹಿಸಲಾಗದು; SIR ರದ್ದಾಗಬೇಕು, ಗ್ಯಾನೇಶ್ ರಾಜೀನಾಮೆ ಕೊಡಬೇಕು: ಸಿದ್ದರಾಮಯ್ಯ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಕಾನೂನು ಮತ್ತು...