ದಸರಾ ಉದ್ಘಾಟನೆಗೆ ಕ್ಷಣಗಣನೆ: ಬಾನು ಮುಷ್ತಾಕ್‌ ಅವರಿಂದ ಇಂದು ಚಾಲನೆ, ಭಾರಿ ಬಿಗಿ ಭದ್ರತೆ

Date:

ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಸೋಮವಾರ (ಸೆ.22) ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

- Advertisement -

ಮೈಸೂರು ದಸರಾ ಉದ್ಘಾಟನೆಗೆ ಮುಸ್ಲಿಂ ಮಹಿಳೆಯನ್ನು ಸರ್ಕಾರ ಆಯ್ಕೆ ಮಾಡಿರುವುದು ಇದೇ ಮೊದಲು. ಬಾನು ಮುಷ್ತಾಕ್‌ ಅವರ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಆಕ್ಷೇಪ ವ್ಯಕ್ತಪಡಿಸಿ, ಬಿಜೆಪಿ ನಾಯಕರು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಎರಡೂ ಕೋರ್ಟ್‌ಗಳು ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿದವರಿಗೆ ಕಪಾಳಮೋಕ್ಷ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ ಅವರು ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿದ್ದು, ಸರ್ಕಾರ ಬಿಗಿ ಭದ್ರತೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಭಾರಿ ಭದ್ರತೆ ನೀಡಲಾಗಿದೆ.

ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9:30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಮೂರು ಕಡೆ ಚೆಕ್ಕಿಂಗ್‌ ಪಾಯಿಂಟ್‌ ಇದ್ದು ಆಗಮಿಸುವ ಪ್ರತಿಯೊಬ್ಬರನ್ನು ಪರಿಶೀಲಿಸಿದ ಬಳಿಕವಷ್ಟೇ ಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗುತ್ತದೆ.

ಉದ್ಘಾಟಕರ ಸ್ವಾಗತಕ್ಕೆ ಚಾಮುಂಡಿ ಬೆಟ್ಟ ಸಿದ್ಧವಾಗಿದ್ದು ಮಹಿಷಾಸುರ ಮೂರ್ತಿಯಿಂದ ದೇವಾಲಯದವರೆಗೆ ಸಾಂಪ್ರಾದಾಯಿಕ ಸ್ವಾಗತ ನೀಡಲಾಗುತ್ತದೆ. ರಸ್ತೆ ಉದ್ದಕ್ಕೂ ರಂಗೋಲಿ ಬಿಡಿಸಿ, ಬಾಳೆ ಕಂಬ ಕಟ್ಟಿ ಸ್ವಾಗತಿಸಲು ತಯಾರಿ ನಡೆದಿದೆ.

ಸೆ.22ರಿಂದ ಅ.2ರವರೆಗೆ ನಡೆಯುವ ಉತ್ಸವ ಇಂದು ಬೆಳಿಗ್ಗೆ ಬೆಟ್ಟದಲ್ಲಿ ಬೆಳಿಗ್ಗೆ 10.10ರಿಂದ 10.40ರೊಳಗೆ ನಾಡದೇವತೆ ಚಾಮುಂಡೇಶ್ವರಿ ದೇವಿಯ ‘ಅಗ್ರಪೂಜೆ’ಯೊಂದಿಗೆ ಆರಂಭಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...