ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಮಾಡಲು ಕೋರ್ಟ್‌ ನಕಾರ, ಮೂಲ ಸೌಕರ್ಯ ಕಲ್ಪಿಸಲು ಸೂಚನೆ

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಇತರೆ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್‌ ಕೋರ್ಟ್ ವಜಾಗೊಳಿಸಿದೆ.

- Advertisement -

ಹಾಗಯೇ ‘ನನಗೆ ಸ್ವಲ್ಪ ವಿಷ ಕೊಡಿ’ ಎಂದಿದ್ದ ದರ್ಶನ್ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಕೋರ್ಟ್ ಸಮ್ಮತಿಸಿದೆ. ಇದರಿಂದಾಗಿ ದರ್ಶನ್ ಅಂಡ್ ಗ್ಯಾಂಗ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲೇ ತಮ್ಮ ವಾಸ ಮುಂದುವರಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದರ್ಶನ್ ಗೆ ಕನಿಷ್ಠ ಮೂಲಸೌಕರ್ಯಗಳನ್ನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸಹ ಕೋರ್ಟ್ ಮಾನ್ಯ ಮಾಡಿದ್ದು, ಜೈಲು ಮ್ಯಾನುಯಲ್ ಪ್ರಕಾರ ಏನೆಲ್ಲಾ ಸೌಲಭ್ಯ ಕೊಡಬೇಕು ಅದನ್ನು ನೀಡಿ ಎಂದು ಕೋರ್ಟ್ ಆದೇಶಿಸಿದೆ. ಅಂದರೆ ಜೈಲಿನೊಳಗೆ ಓಡಾಡಲು, ಹಾಸಿಗೆ ದಿಂಬು ನೀಡಲು ಕೋರ್ಟ್ ಸೂಚಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದರು. ನಟ ದರ್ಶನ್ ಬೇಡಿಕೆ ಕೇಳಿದ ಜಡ್ಜ್ ಕೂಡ ಆಶ್ಚರ್ಯ ಪಟ್ಟಿದ್ದರು.

ವಿಷ ಕೇಳಿದ ದರ್ಶನ್‌ಗೆ ಹಾಗೆಲ್ಲಾ ಕೇಳದಂತೆ ನ್ಯಾಯಾಧೀಶರು ಸೂಚಿಸಿದ್ದರು. ಜೈಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಮಧ್ಯಾಹ್ನ ನೀಡುವುದಾಗಿ ನ್ಯಾಯಾಧೀಶರು ಬೆಳಗಿನ ವಿಚಾರಣೆಯಲ್ಲಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...