ಮಧ್ಯಪ್ರಾಚ್ಯದ ಬಿಕ್ಕಟ್ಟು | ಮಸಾಲೆ-ದಿನಸಿ ವ್ಯಾಪಾರಕ್ಕೂ ಭಾರಿ ಆಘಾತ  

Date:

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಪರಿಣಾಮ ಈಗ ರಾಜಧಾನಿ ಬೆಂಗಳೂರಿನಲ್ಲಿ ಮಸಾಲೆ ಹಾಗೂ ದಿನಸಿ ವ್ಯಾಪಾರಿಗಳ ಮೇಲೆ ಗಂಭೀರವಾಗಿ ಬೀಳತೊಡಗಿದೆ. ಕಳೆದ ಎರಡು ವಾರಗಳಿಂದ ಮಸಾಲೆ ಪದಾರ್ಥಗಳು ಹಾಗೂ ದಿನಸಿ ವಸ್ತುಗಳ ವಹಿವಾಟು ಶೇ.50ರಷ್ಟು ಕುಸಿತ ಕಂಡಿದ್ದು, ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ.

- Advertisement -

ಹೋಟೆಲ್ ಮತ್ತು ಕ್ಯಾಟರಿಂಗ್ ವಲಯದಲ್ಲಿನ ಮಂದಗತಿಯಿಂದ ಈ ಪರಿಣಾಮ ನೇರವಾಗಿ ಮಸಾಲೆ ವ್ಯಾಪಾರಕ್ಕೂ ತಟ್ಟಿದೆ.

ಅರಿಶಿನ, ಜೀರಿಗೆ, ಸಾಸಿವೆ, ಕರಿಮೆಣಸು, ಏಲಕ್ಕಿ, ಲವಂಗ, ದಾಲ್ಚಿನ್ನಿ, ಕೊತ್ತಂಬರಿ ಬೀಜ ಹಾಗೂ ಒಣ ಮೆಣಸಿನಕಾಯಿ ಸೇರಿದಂತೆ ಪ್ರಮುಖ ಮಸಾಲೆ ಪದಾರ್ಥಗಳ ಖರೀದಿ ಗಣನೀಯವಾಗಿ ಇಳಿಕೆಯಾಗಿದೆ. ಹೋಟೆಲ್ ಮತ್ತು ಕ್ಯಾಟರಿಂಗ್ ಕಾರ್ಯಕ್ರಮಗಳು ಕಡಿಮೆಯಾಗಿರುವುದರಿಂದ ಹೋಲ್‌ಸೇಲ್ ಮಸಾಲೆ ವ್ಯವಹಾರ ಬಹುತೇಕ ಸ್ಥಗಿತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದರ ಜೊತೆಗೆ ಕಮರ್ಷಿಯಲ್ LPG ಕೊರತೆಯೂ ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಿದ್ದು, ಅದರ ಪರಿಣಾಮವಾಗಿ ದಿನಸಿ ವಸ್ತುಗಳ ಖರೀದಿ ಸಹ ಕುಸಿತ ಕಂಡಿದೆ. “ಹೋಟೆಲ್ ಹಾಗೂ ಕ್ಯಾಟರಿಂಗ್ ಚೆನ್ನಾಗಿ ನಡೆದರೆ ನಮಗೂ ವ್ಯವಹಾರ ಇರುತ್ತದೆ. ಈಗ ಅವರು ಕುಸಿದರೆ ನಾವು ಕೂಡ ಸಂಕಷ್ಟಕ್ಕೆ ಸಿಲುಕುತ್ತೇವೆ” ಎಂದು ವ್ಯಾಪಾರಿಗಳು ಅಳಲು ವ್ಯಕ್ತಪಡಿಸಿದ್ದಾರೆ.

ಸ್ಟಾಕ್ ಜಾಸ್ತಿಯಾಗಿ ಉಳಿಯುತ್ತಿರುವುದರಿಂದ ವ್ಯಾಪಾರಿಗಳು ನಷ್ಟದ ಭೀತಿ ಎದುರಿಸುತ್ತಿದ್ದಾರೆ. “ಮದುವೆ ಸೀಸನ್‌ನಲ್ಲೇ ಇಂತಹ ಕುಸಿತ ಎಂದಿಗೂ ನೋಡಿಲ್ಲ. ಯಾರೂ ಖರೀದಿ ಮಾಡುತ್ತಿಲ್ಲ” ಎಂದು ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.

ಯುದ್ಧದ ಪರಿಣಾಮ ಹೋಟೆಲ್ ವಲಯದಿಂದ ಆರಂಭವಾಗಿ ಈಗ ಮಸಾಲೆ ಮತ್ತು ದಿನಸಿ ವ್ಯಾಪಾರಿಗಳಿಗೂ ವ್ಯಾಪಕ ಸಂಕಷ್ಟವನ್ನು ತಂದಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೇಗಿರಲಿದೆ ಎಂಬುದು ಆತಂಕಕಾರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...