ಆರ್‌ಎಸ್‌ಎಸ್‌ ಕುರಿತು ಟೀಕೆ: ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ನೋಟಿಸ್‌

Date:

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಟೀಕಿಸಿದ್ದ ಆರೋಪದ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್ ಹಾಗೂ ಕಾಂಗ್ರೆಸ್‌ ಯುವ ನಾಯಕ ಮೊಹಮ್ಮದ್ ಹ್ಯಾರಿಸ್‌ ನಲಪಾಡ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.

- Advertisement -

ಬೆಂಗಳೂರು ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ತೇಜಸ್‌ ಎ ಎಂಬಾತ ಮೂವರ ವಿರುದ್ಧವೂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2025ರ ಅಕ್ಟೋಬರ್‌ನಲ್ಲಿ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಶಾಲಾ-ಕಾಲೇಜುಗಳ ಮೈದಾನಗಳು ಸೇರಿದಂತೆ ಸರ್ಕಾರಿ ಆವರಣದಲ್ಲಿ ಅನುಮತಿ ಪಡೆಯದೆ ನಡೆಸುವ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದರು. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದರು.

ಈ ಲೇಖನ ಓದಿದ್ದೀರಾ?: ಮುಗಿಯದ ಅಮೆರಿಕದ ‘ಸಾಮ್ರಾಜ್ಯಶಾಹಿ’ ಹಸಿವು: ವೆನೆಜುವೆಲಾ ನಂತರ ಗ್ರೀನ್‌ಲ್ಯಾಂಡ್‌ ಸರದಿ?

ಆ ಪತ್ರ ಮತ್ತು ಪೋಸ್ಟ್‌ ಆಧರಿಸಿ ದೂರು ನೀಡಿರುವ ಆರ್‌ಎಸ್‌ಎಸ್‌ ಕಾರ್ಯಕರ್ತ ತೇಜಸ್, “ಪ್ರಿಯಾಂಕ್‌ ಖರ್ಗೆ ಅವರ ಪೋಸ್ಟ್‌ ಮತ್ತು ಪತ್ರದಲ್ಲಿ ಆರ್‌ಎಸ್‌ಎಸ್‌ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಲಾಗಿದೆ. ಅಲ್ಲದೆ, ಅವರ ಪೋಸ್ಟ್‌ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ದಿನೇಶ್‌ ಗುಂಡೂರಾವ್ ಕೂಡ ಅದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ನಡಪಾಡ್ ಕೂಡ ಯೂಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸಂಘದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ, ನನಗೆ ತೀವ್ರವಾಗಿ ನೋವಾಗಿದೆ. ಇಂತಹ ಹೇಳಿಕೆಗಳು ಸಂಘದ ಕುರಿತು ಸಾರ್ವಜನಿಕರಲ್ಲಿ ಕೆಟ್ಟು ಅಭಿಪ್ರಾಯಗಳನ್ನು ರೂಪಿಸುತ್ತವೆ” ಎಂದು ಆರೋಪಿಸಿದ್ದಾರೆ.

ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ಮೂವರಿಗೂ ಬಿಎನ್‌ಎಸ್‌ಎಸ್‌ನ ಸೆಕ್ಷನ್ 223ರ ಅಡಿಯಲ್ಲಿ ನೋಟಿಸ್‌ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆಯಲ್ಲಿ 14ಕ್ಕೆ ಮುಂದೂಡಿಸಿದ್ದು, ಅಂದು ಸಚಿವರು ವಿಚಾರಣೆಗೆ ಹಾಜರಾಗುಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...