ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

Date:

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

- Advertisement -

2026ರ ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಅವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕೇಂದ್ರ ಗೃಹ ಸಚಿವಾಲಯವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಸೆಪ್ಟೆಂಬರ್ 3ರಂದು ರಾಜ್ಯ ಸಚಿವ ಸಂಪುಟ ಕೈಗೊಂಡ ನಿರ್ಣಯ ಮತ್ತು ಸೆಪ್ಟೆಂಬರ್ 8ರಂದು ಹೊರಡಿಸಿದ ಆದೇಶವು ಕೇಂದ್ರ ಗೃಹ ಸಚಿವಾಲಯದ ಸೂಚನೆಗಳಿಗೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಾಗರಿಕರು ಮತ್ತು ಸರ್ಕಾರಿ ನೌಕರರ ಮೂಲ ಹಕ್ಕುಗಳಿಗೆ ಇದರಿಂದ ಧಕ್ಕೆ ಉಂಟಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು ಹಾಗೂ ಅಧಿಕೃತವಾಗಿ ಅಂಗೀಕರಿಸಲಾದ ಪೂರ್ಣ ವಂದೇ ಮಾತರಂ ಗೀತೆಯನ್ನೇ ಹಾಡುವಂತೆ ಸೂಚಿಸಬೇಕು ಎಂದು ಅರ್ಜಿದಾರರು ಸೆಪ್ಟೆಂಬರ್ 14ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಮೆಟ್ಟಿಲೇರಿರುವುದಾಗಿ ಅರ್ಜಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ಭಾಗವಹಿಸುವ, ಪ್ರದರ್ಶನ ನೀಡುವ ಹಾಗೂ ಹಾಜರಾಗುವ ನಾಗರಿಕರ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಗೀತೆಗೆ ಸಂಬಂಧಿಸಿದ ವಿಚಾರದಲ್ಲಿ ರಾಜ್ಯ ಸರ್ಕಾರ ಸಂವಿಧಾನಾತ್ಮಕ ಮಿತಿಗಳನ್ನು ಪಾಲಿಸಬೇಕು. ಕೇಂದ್ರ ಸರ್ಕಾರದೊಂದಿಗಿನ ತನ್ನ ಕರ್ತವ್ಯಗಳನ್ನೂ ನಿರ್ವಹಿಸಬೇಕು. ಈ ಮಿತಿಗಳ ಉಲ್ಲಂಘನೆಯಿಂದ ಉಂಟಾಗುವ ಹಾನಿ ಒಬ್ಬ ವ್ಯಕ್ತಿಗೆ ಮಾತ್ರ ಸೀಮಿತವಾಗದೆ ಎಲ್ಲ ನಾಗರಿಕರಿಗೂ ಅನ್ವಯಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಕ್ಷಿಪ್ತ ರೂಪವನ್ನು ಹಾಡುವಂತೆ ಸೂಚಿಸಿರುವುದರಿಂದ, ಸರ್ಕಾರಿ ನೌಕರರು ತಮ್ಮ ಉದ್ಯೋಗದಾತರಾಗಿರುವ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದು ಪ್ರಾಯೋಗಿಕವಾಗಿ ಕಷ್ಟಕರವಾಗಿದೆ. ಹೀಗಾಗಿ, ಇದು ನೈಜ ಮತ್ತು ವ್ಯಾಪಕ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರವಾಗಿದ್ದು, ಸಾರ್ವಜನಿಕ ಕರ್ತವ್ಯ ಜಾರಿಗೊಳಿಸುವ ವಿಷಯವೂ ಆಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ವಂದೇ ಮಾತರಂ ವಿವಾದ | ʼಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಕಾನೂನು ಬದಲಿಸಲಿʼ: ಜೆ&ಕೆ ಸಿಎಂ ಒಮರ್‌ ಅಬ್ದುಲ್ಲಾ

ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಇತರ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶಿಸಿದೆ.

ಎಐಸಿಸಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ತೀರ್ಮಾನಿಸಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು...

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...

ರಾಮ್‌ ಗೋಪಾಲ ವರ್ಮಾಗೆ ₹29.67 ಕೋಟಿ ರಿಕವರಿ ನೋಟಿಸ್!

ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ‘ಎಕ್ಲಟಾಂಟ್ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್’...