ಅಪ್ಪಳಿಸಲಿದೆ ಚಂಡಮಾರುತ; ರಾಜ್ಯದ 13 ಜಿಲ್ಲೆಗಳಲ್ಲಿ ನ.19ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳ ಕೊಲ್ಲಿಯಲ್ಲಿ ‘ಅರ್ನಾಬ್ ಮುರಸು’ ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಇದೀಗ ಮತ್ತೊಂದು ಚಂಡಮಾರುತದ ಆತಂಕ ಎದುರಾಗಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ವ್ಯಾಪ್ತಿಯಲ್ಲಿ ವಾಯುಭಾರ ಕುಸಿದಿದ್ದು, ನವೆಂಬರ್ 16ರಂದು ಪ್ರಬಲ ಚಂಡಮಾರುತವು ಭಾರತದ ಪೂರ್ವ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪರಿಣಾಮ, ಕರ್ನಾಟಕದಲ್ಲಿಯೂ ನವೆಂಬರ್ 18 ಮತ್ತು 19ರಂದು ಭಾರೀ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ.

- Advertisement -

ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಧಾರವಾಡ ಜಿಲ್ಲೆಗಳಿಗೆ ನವೆಂಬರ್ 19ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಇತ್ತೀಚೆಗಷ್ಟೇ ಹವಾಮಾನ ಇಲಾಖೆಯು ರಾಜ್ಯದಲ್ಲಿ ಸುಮಾರು 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇಲ್ಲವೆಂದು ಹೇಳಿತ್ತು. ಆದರೆ, ಇದೀಗ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಠಾತ್ ಹವಾಮಾನ ಬದಲಾವಣೆಯಿಂದಾಗಿ, ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನವೆಂಬರ್ 15ರಂದು ಮತ್ತಷ್ಟು ತೀವ್ರಗೊಂಡು, ವಾಯುವ್ಯ ದಿಕ್ಕಿನತ್ತ ಚಲಿಸಲಿದೆ. ನವೆಂಬರ್ 16ರ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ಚಂಡಮಾರುತವಾಗಿ ರೂಪುಗೊಂಡು ಕರಾವಳಿ ತೀರಗಳಿಗೆ ಅಪ್ಪಳಿಸಲಿದೆ. ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಎರಡೂ ರಾಜ್ಯಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಪ್ರಕ್ಷುಬ್ಧಗೊಂಡಿದ್ದು, ಗಂಟೆಗೆ 50 ರಿಂದ 65 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಹೀಗಾಗಿ, ಈಗಾಗಲೇ ಸಮುದ್ರಕ್ಕೆ ಇಳಿದಿರುವ ಮೀನುಗಾರರು ತಕ್ಷಣವೇ ದಡಕ್ಕೆ ಮರಳುವಂತೆ ಸೂಚಿಸಲಾಗಿದೆ. ಅಲ್ಲದೆ, ನವೆಂಬರ್ 15ರಿಂದ 18ರವರೆಗೆ ಆಗ್ನೇಯ ಬಂಗಾಳಕೊಲ್ಲಿ ಮತ್ತು ನವೆಂಬರ್ 16ರಿಂದ 19ರವರೆಗೆ ಮಧ್ಯ ಬಂಗಾಳಕೊಲ್ಲಿ ಭಾಗದಲ್ಲಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027 ಯುಪಿ ಚುನಾವಣೆ | ಬಿಟ್ಟುಹೋದ 40-80 ಲಕ್ಷ ಹಿಂದೂ ಮತದಾರರನ್ನೇ ಸೇರಿಸಲು ಯೋಗಿ ಸರ್ಕಾರದ ‘ಅಂತಿಮ್ ಮೌಕಾ’ ಅಭಿಯಾನ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿ...

ಶ್ರೀಕೃಷ್ಣನಿಗೆ ಅವಮಾನ: ಬಾಬಾ ಬಾಗೇಶ್ವರ ವಿರುದ್ಧ ತೀವ್ರಗೊಂಡ ಯಾದವರ ಪ್ರತಿಭಟನೆ!

ಶ್ರೀರಾಮ ಮತ್ತು ಶ್ರೀಕೃಷ್ಣನ ನಡುವೆ ತುಲನೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ...

ಈ ದಿನ ಸಂಪಾದಕೀಯ | ಪ್ರಶ್ನೆ ಕೇಳುವ ಪತ್ರಕರ್ತರಿಗೆ ವೀಸಾ ರದ್ದು; ಮೋದಿ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ?

ಪ್ರಜಾಪ್ರಭುತ್ವದ ಹಿರಿಮೆ ಕೇವಲ ಭಾಷಣಗಳಲ್ಲಿಲ್ಲ. ವಿಮರ್ಶೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡುವುದರಲ್ಲಿದೆ....

ಪಿಂಚಣಿ ಸರ್ಕಾರದ ಕೃಪೆಯಲ್ಲ, ನಿವೃತ್ತ ನೌಕರರ ಕಾನೂನುಬದ್ಧ ಹಕ್ಕು: ಕರ್ನಾಟಕ ಹೈಕೋರ್ಟ್

ಪಿಂಚಣಿ ಎನ್ನುವುದು ಸರ್ಕಾರ ಅಥವಾ ಆಡಳಿತ ಮಂಡಳಿಗಳು ನೌಕರರಿಗೆ ನೀಡುವ ಯಾವುದೇ...