ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್‌ ಆಯ್ಕೆ

Date:

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಕಾಂಗ್ರೆಸ್‌ನ ಎಲ್ಲ ಶಾಸಕರ ಸಭೆಯಲ್ಲಿ ಒಮ್ಮತದಿಂದ ಡಿ.ಕೆ ಶಿವಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಸರ್ಕಾರ ರಚನೆಗೆ ಇಂದೇ ಹಕ್ಕು ಮಂಡಿಸುವ ಸಾಧ್ಯತೆ ಇದೆ.

- Advertisement -

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆ ಬಳಿಕ ಹೊಸ ಸರ್ಕಾರ ರಚನೆಗೆ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಇಂದು ಸಭೆ ಕರೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ಸಭೆಯಲ್ಲಿ, ಈವರೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ನೂತನ ನಾಯಕರ ಆಯ್ಕೆಗಾಗಿ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿದ್ದರು. ಅವರ ಪ್ರಸ್ತಾಪಕ್ಕೆ ಬಹುತೇಕ ಎಲ್ಲ ಶಾಸಕರು ಸಮ್ಮತಿ ಸೂಚಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಹಿಯಾ ಚಿಂತನೆಗಳನ್ನು ಜಾರಿಗೆ ತರಲು ಗ್ಯಾರಂಟಿ ಯೋಜನೆಗಳ ಮೂಲಕ ಪ್ರಯತ್ನಿಸಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿನ ಅಸಮಾನತೆ ಮತ್ತು ಜಾತೀಯತೆಯನ್ನು ತೊಡೆದುಹಾಕದೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ....

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ರಾಜ್ಯದಲ್ಲಿ ಮಳೆ ಆರ್ಭಟ; 15 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ...