ರಾಯಚೂರು ದಲಿತರ ಮೇಲಿನ ದೌರ್ಜನ್ಯ: ಸಿಐಡಿ ತನಿಖೆಗೆ ಒತ್ತಾಯಿಸಿ ಗೃಹ ಸಚಿವರಿಗೆ ಶಾಸಕರು, ದಲಿತ ಮುಖಂಡರ ನಿಯೋಗ ಮನವಿ

Date:

ರಾಯಚೂರು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ರಾಜ್ಯಾದ್ಯಂತ ತೀವ್ರ ಕಳವಳಕ್ಕೆ ಕಾರಣವಾಗಿವೆ. ಜಿಲ್ಲೆಯಲ್ಲಿ‌ನ‌ ದಲಿತರ ಮೇಲಿನ ದೌರ್ಜನ್ಯದ ಮೂರು‌ ಪ್ರಮುಖ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಸಿಐಡಿಗೆ ವಹಿಸಬೇಕು ಎಂದು ಗೃಹ ಸಚಿವರನ್ನು‌ ದಲಿತ ಮುಖಂಡರು ಮತ್ತು ಜನಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಒತ್ತಾಯಿಸಿದೆ.

- Advertisement -

ರಾಚಚೂರು ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಮತ್ತು ಮಾಜಿ ಸಚಿವ ಎನ್. ಎಸ್. ಬೋಸರಾಜು ಅವರ ನೇತೃತ್ವದದ ನಿಯೋಗವು ಬೆಂಗಳೂರಿನಲ್ಲಿ ಗೃಹ ಸಚಿವ‌ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. “ರಾಯಚೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರ ಒತ್ತಡಕ್ಕೆ ಮಣಿದು ಪ್ರಕರಣಗಳನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (DCRE) ಒಪ್ಪಿಸಿತ್ತು. ಆದರೆ ಅಲ್ಲಿ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯಗಳ ಕೊರತೆ ಇರುವುದರಿಂದ ಸಮಗ್ರ ತನಿಖೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂಬ ವಿಷಯವನ್ನು ನಿಯೋಗವು ಸಚಿವರ ಗಮನಕ್ಕೆ ತಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಚರ್ಚೆಯ ವೇಳೆ ಪ್ರಕರಣಗಳ ಭೀಕರತೆಯನ್ನು ವಿವರಿಸಿದ ಮುಖಂಡರು, “ಭೂಮಾನಂದ ಅವರ ಭೀಕರ ಕಗ್ಗೊಲೆಯು ಇಡೀ ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ. ಅಲ್ಲದೆ, ಅಶ್ವಿನಿ ಮತ್ತು ರಾಣೆಮ್ಮ ಎಂಬುವರ ಮೇಲಿನ ಅತ್ಯಾಚಾರ ಪ್ರಕರಣಗಳು ವಿಕೃತ ಕಾಮಿ ಉಮೇಶ್ ರೆಡ್ಡಿಯ ಕೃತ್ಯವನ್ನೂ ಮೀರಿಸುವಂತಹ ವಿಕೃತಿಯಿಂದ ಕೂಡಿದ್ದು, ಸಮಾಜ ತಲೆತಗ್ಗಿಸುವಂತೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಯೋಗದ ಅಭಿಪ್ರಾಯಗಳನ್ನು ಆಲಿಸಿದ ಗೃಹ ಸಚಿವರು, “ಈ ಪ್ರಕರಣಗಳ ಗಂಭೀರತೆ ಮತ್ತು ಸತ್ಯಾಸತ್ಯತೆಗಳು ಈಗಾಗಲೇ ತಮ್ಮ ಗಮನದಲ್ಲಿದೆ. ಯಾವುದೇ ಕಾರಣಕ್ಕೂ ಆರೋಪಿಗಳನ್ನು ರಕ್ಷಿಸುವ ಅಥವಾ ಅವರ ಬಂಧನದಲ್ಲಿ ನಿರ್ಲಕ್ಷ್ಯ ವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವ್ಯವಸ್ಥೆಯ ಮೇಲೆ‌ ನಂಬಿಕೆ‌ ಇಡಿ” ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ಸ್ಥಳದಲ್ಲಿದ್ದ ಉನ್ನತ ಪೊಲೀಸ್ ಅಧಿಕಾರಿಗಳಿಗೆ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ನಿಯೋಗದಲ್ಲಿ ದಲಿತ ಮುಖಂಡ ಎಸ್. ಮಾರೆಪ್ಪ (ವಕೀಲರು), ರವೀಂದ್ರನಾಥ್ ಪಟ್ಟಿ, ಅಂಬಣ್ಣ ಅರೋಲಿಕರ್, ಶಿವರಾಯ ಅಕ್ಕರಕಿ, ಹೇಮರಾಜ್ ಅಸ್ಕಿಹಾಳ್, ಶರಣಪ್ಪ ದಿನ್ನಿ, ಬೂದೆಪ್ಪ ಕ್ಯಾದಿಗಿ, ಬಸವರಾಜ್ ಮಿಯಾಪುರ, ಬಸವರಾಜ್ ಹದ್ದಿನಾಳ್, ಅರ್ಜುನ್ ಜಗಲಿ, ನರಸಿಂಹಲು ನೆಲಹಾಳ್, ನರಸಿಂಹಲು ಮರ್ಚಟಾಳ್, ಬಸವರಾಜ್ ಭಂಡಾರಿ, ವಸಂತ್ ಅಸ್ಕಿಹಾಳ್ ಹಾಗೂ ತಾಯಪ್ಪ ಗದಾರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...